ಚಾಮರಾಜನಗರ: ಮಗುವನ್ನು ಬೇಲಿಗೆ ಎಸೆದು ಆನೆಯಿಂದ ಬಚಾವ್ ಮಾಡಿ, ತನ್ನನ್ನೇ ಬಲಿಕೊಟ್ಟ ತಾಯಿ!
ಕಾಡಾನೆ ದಾಳಿ ವೇಳೆ ತನ್ನ ಮಗುವನ್ನು ಕಾಪಾಡಿದ ತಾಯಿ ತನ್ನನ್ನೇ ಬಲಿ ಕೊಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದ ದೊಡ್ಡಾಣೆ ...

Published On :
ಚಾಮರಾಜನಗರ: ಕಾಡಾನೆ ದಾಳಿ ವೇಳೆ ತನ್ನ ಮಗುವನ್ನು ಕಾಪಾಡಿದ ತಾಯಿ ತನ್ನನ್ನೇ ಬಲಿ ಕೊಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದ ದೊಡ್ಡಾಣೆ ಬಳಿ ನಡೆದಿದೆ.
ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದ ಬಳಿಯ ಹಳೆಯೂರು ಗ್ರಾಮದ ಗೌರಮ್ಮ(45) ಕಾಡಾನೆ ದಾಳಿಗೆ ಬಲಿಯಾದ ಮಹಿಳೆ. ದೊಡ್ಡಾಣೆ ಗ್ರಾಮದಲ್ಲಿ ಹಬ್ಬ ಮುಗಿಸಿ 4 ವರ್ಷದ ಹೆಣ್ಣು ಮಗುವಿನೊಂದಿಗೆ ಗೌರಮ್ಮ ಊರಿಗೆ ಬರುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ದಾರಿ ಮಧ್ಯೆ ಕಾಡಾನೆ ಎದುರಾಗಿದೆ. ಕಾಡಾನೆ ಕಂಡ ತಕ್ಷಣ ಕಂಕುಳಲ್ಲಿದ್ದ ಮಗುವನ್ನು ಗೌರಮ್ಮ ಬೇಲಿಗೆ ಎಸೆದಿದ್ದಾರೆ.
ಗೌರಮ್ಮನವರ ಮೇಲೆ ದಾಳಿ ನಡೆಸಿದ ಕಾಡಾನೆ ತುಳಿದು ಸಾಯಿಸಿದೆ. ಮಗುವನ್ನು ಬೇಲಿಗೆ ಎಸೆದಿದ್ದರಿಂದ ಹೆಣ್ಣು ಮಗು ಅಪಾಯದಿಂದ ಪಾರಾಗಿದೆ. ಹೆಣ್ಣುಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


