ಚಿತ್ರದುರ್ಗ: ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಕೊಲೆ
ಕಲ್ಲಿನಿಂದ ಜಜ್ಜಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊರವಲಯದಲ್ಲಿ ಬುಧವಾರ ತಡರಾತ್ರಿ ನಡೆದಿದೆ.

Published On :
ಚಿತ್ರದುರ್ಗ: ಕಲ್ಲಿನಿಂದ ಜಜ್ಜಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊರವಲಯದಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಲಕ್ಷ್ಮಮ್ಮ ಬಡಾವಣೆಯ ನಿವಾಸಿ ಸರವಣ (45) ಹತ್ಯೆಯಾದವರು . ಹಿರಿಯೂರಿನ ಹೊರವಲಯದಲ್ಲಿನ 70 ಕಣಿವೆ ಸೇತುವೆ ಬಳಿ ಇರುವ ತೋಟವೊಂದರಲ್ಲಿ ತಡರಾತ್ರಿ ಸರವಣ ಅವರನ್ನು ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪಿಎಸ್ ಐ ಮಂಜುನಾಥ್ ಭೇಟಿ ಪರಿಶೀಲಿಸಿದ್ದು, ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


