ವಾರದೊಳಗೆ ಅಭಿಮಾನಿಗೆ ಚಪ್ಪಲಿ ಕೊಡಿಸಲಿದ್ದಾರೆ ಸಿಎಂ ಯಡಿಯೂರಪ್ಪ!
ಬಿ ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುವವರೆಗೆ ಬರಿಗಾಲಿನಿಂದ ನಡೆಯುವುದಾಗಿ ಶಪಥ ಮಾಡಿದ್ದ ಅಭಿಮಾನಿಗೆ ತಾವು ಮುಖ್ಯಮಂತ್ರಿಯಾದ...

Published On :
ಮಂಡ್ಯ: ಬಿ ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗುವವರೆಗೆ ಬರಿಗಾಲಿನಿಂದ ನಡೆಯುವುದಾಗಿ ಶಪಥ ಮಾಡಿದ್ದ ಅಭಿಮಾನಿಗೆ ತಾವು ಮುಖ್ಯಮಂತ್ರಿಯಾದ ಹಿನ್ನೆಲೆಯಲ್ಲಿ ವಾರದೊಳಗೆ ಹೊಸ ಚಪ್ಪಲಿ ಕೊಡಿಸುವುದಾಗಿ ಬಿಎಸ್ ವೈ ಭರವಸೆ ನೀಡಿದ್ದಾರೆ.
ಯಡಿಯೂರಪ್ಪ ಅವರು ಕಳೆದ ವರ್ಷ ಮೂರೇ ದಿನದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಾಗ ಬಿ ಎಸ್ ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿ ಆಗುವವರೆಗೂ ಚಪ್ಪಲಿ ತೊಡುವುದಿಲ್ಲ ಎಂದು ಶಪಥ ಮಾಡಿದ್ದ ಬಿಎಸ್ ವೈ ಅಭಿಮಾನಿ ಶಿವಕುಮಾರ್ ಆರಾಧ್ಯ ಅವರು ಕಳೆದ 14 ತಿಂಗಳಿಂದ ಚಪ್ಪಲಿ ಇಲ್ಲದೆ ಬರಿಗಾಲಲ್ಲಿ ತಿರುಗಾಡುತ್ತಿದ್ದರು.
ಮೂಲತಃ ಮಂಡ್ಯ ತಾಲೂಕಿನ ಉಪ್ಪರಕನಹಳ್ಳಿ ನಿವಾಸಿಯಾದ ಶಿವಕುಮಾರ್ ಆರಾಧ್ಯ, ಶನಿವಾರ ಬಿ ಎಸ್ ಯಡಿಯೂರಪ್ಪ ಹುಟ್ಟೂರು ಬೂಕನಕೆರೆಯಲ್ಲಿ ಅಭಿಮಾನಿಗಳಿಗೆ ಅಭಿನಂದನೆ ಸಲ್ಲಿಸಲು ಹೋಗಿದ್ದಾಗ, ಶಪಥ ತಿಳಿದು ಯಡಿಯೂರಪ್ಪ ಸಂತಸಗೊಂಡಿದ್ದಾರೆ. ಅಲ್ಲದೆ ಅವರಿಗೆ ವಾರದೊಳಗೆ ಹೊಸ ಚಪ್ಪಲಿ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


