ಬಿಎಸ್ ವೈ ವಿಶ್ವಾಸಮತ: ಜು. 29, 30ರಂದು ವಿಧಾನಸೌಧ ಸುತ್ತ ನಿಷೇಧಾಜ್ಞೆ ಜಾರಿ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ನಂತರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ ಬಿಎಸ್...

Published On :
ಬೆಂಗಳೂರ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ನಂತರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ವಿಶ್ವಾಸ ಮತಯಾಚನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 29 ಮತ್ತು 30ರಂದು ವಿಧಾನಸೌಧ ಸುತ್ತಮುತ್ತ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮಂಗಳವಾರ ಮಧ್ಯಾಹ್ನ 12 ಗಂಟೆವರೆಗೂ ನಿಷೇಧಾಜ್ಞೆ ಮುಂದುವರಿಯಲಿದೆ. ಸೆಕ್ಷನ್ 144 ಅಡಿಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿಷೇಧಾಜ್ಞೆ ಜಾರಿಗೊಳಿಸುತ್ತಿರುವುದಾಗಿ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು ತಿಳಿಸಿದ್ದಾರೆ.
ಕಳೆದ ಮಂಗಳವಾರ ಎಚ್ ಡಿ ಕುಮಾರಸ್ವಾಮಿ ಅವರ ವಿಶ್ವಾಸಮತಯಾಚನೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಬೆಂಗಳೂರು ನಗರದಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇದೀಗ ಮತ್ತೆ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


