ರಾತ್ರೋರಾತ್ರಿ ಬೆಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ, 500ಕ್ಕೂ ಹೆಚ್ಚು ವಾಹನಗಳ ವಶ!
ರಾತ್ರೋರಾತ್ರಿ ದಿಢೀರ್ ಕಾರ್ಯಾಚರಣೆ ನಡೆಸಿದ ಬೆಂಗಳೂರು ನಗರ ಪೊಲೀಸರು 500ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಂಗಳೂರು...

Published On :
ಬೆಂಗಳೂರು: ರಾತ್ರೋರಾತ್ರಿ ದಿಢೀರ್ ಕಾರ್ಯಾಚರಣೆ ನಡೆಸಿದ ಬೆಂಗಳೂರು ನಗರ ಪೊಲೀಸರು 500ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.
ಬೆಂಗಳೂರು ನಗರದಲ್ಲಿ ರಾತ್ರಿ ವೇಳೆಯಲ್ಲಿನ ಕಾನೂನು ಬಾಹಿರ ಚಟುವಟಿಕೆಗಳು & ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ಬೆಂಗಳೂರು ನಗರ ಪೊಲೀಸರು ನಗರದಾದ್ಯಂತ ನಾಕಾಬಂಧಿ ತಪಾಸಣೆಯನ್ನು ಕೈಗೊಂಡು 499 ಕ್ಕೂ ಹೆಚ್ಚು ಸಂಶಯಾಸ್ಪದರನ್ನು ವಿಚಾರಣೆಗೊಳಪಡಿಸಿ ಸುಮಾರು 500 ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು ಎಂದು ಟ್ವೀಟ್ ಮಾಡಿದ್ದಾರೆ.
ರಾತ್ರಿ ವೇಳೆ ನಗರದಲ್ಲಿ ಹೆಚ್ಚು ಅಪರಾಧ ಪ್ರಕರಣಗಳು ನಡೆಯುವುದರಿಂದ ತೀವ್ರ ಎಚ್ಚರ ವಹಿಸಿರುವ ಬೆಂಗಳೂರು ಪೊಲೀಸರು ದಿಢೀರ್ ಕಾರ್ಯಾಚರಣೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


