ಐಎಂಎ ವಂಚನೆ ಪ್ರಕರಣ: ರಾಜಕಾರಣಿಗಳ ಹೆಸರು ಬಾಯಿಬಿಟ್ಟ ಮನ್ಸೂರ್
ಐಎಂಎ ಜ್ಯುವೆಲರ್ಸ್ ಬಹುಕೋಟಿ ವಂಚನೆಯ ಪ್ರಮುಖ ಆರೋಪಿ ಮನ್ಸೂರ್ ಖಾನ್ ನನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಒಂದು ವಾರದಿಂದ ತೀವ್ರ ವಿಚಾರಣೆ ನಡೆಸುತ್ತಿದ್ದು, ಅಧಿಕಾರಿಗಳ ಎದುರು ಕೆಲವು ಕುತೂಹಲಕಾರಿ ಮಾಹಿತಿಯನ್ನು ಬಾಯಿ ಬಿಟ್ಟಿದ್ದಾನೆ ಎನ್ನಲಾಗುತ್ತಿದೆ.

Published On :
ಬೆಂಗಳೂರು: ಐಎಂಎ ಜ್ಯುವೆಲರ್ಸ್ ಬಹುಕೋಟಿ ವಂಚನೆಯ ಪ್ರಮುಖ ಆರೋಪಿ ಮನ್ಸೂರ್ ಖಾನ್ ನನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಒಂದು ವಾರದಿಂದ ತೀವ್ರ ವಿಚಾರಣೆ ನಡೆಸುತ್ತಿದ್ದು, ಅಧಿಕಾರಿಗಳ ಎದುರು ಕೆಲವು ಕುತೂಹಲಕಾರಿ ಮಾಹಿತಿಯನ್ನು ಬಾಯಿ ಬಿಟ್ಟಿದ್ದಾನೆ ಎನ್ನಲಾಗುತ್ತಿದೆ.
ಜಾರಿ ನಿರ್ದೇಶನಾಲಯ ಅಧಿಕಾರಿಗಳ ಪ್ರಶ್ನೆಗಳಿಗೆ ಮನ್ಸೂರ್ ಖಾನ್ ಬೆಚ್ಚಿ ಬಿದಿದ್ದು, ಅತ ಅಧಿಕಾರಿಗಳ ಕೈಗೆ ಒಂದು ಡೈರಿ ಕೊಟ್ಟಿದ್ದಾನೆ. ಅದರಲ್ಲಿ ಹಣದ ಬಗ್ಗೆ ಹಾಗೂ ಸುಮಾರು 15 ಜನ ರಾಜಕಾರಣಿಗಳ ಹೆಸರು ಬರೆದುಕೊಟ್ಟಿದ್ದಾನೆ ಎನ್ನಲಾಗಿದೆ.
ಇದರಲ್ಲಿ ಕೆಲ ಶಾಸಕರು ,ಕಾರ್ಪೋರೇಟರ್ ಗಳು ಇದ್ದಾರೆ. ಮನ್ಸೂರ್ ಖಾನ್ ಬರೆದುಕೊಟ್ಟಿರುವ ಡೈರಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷದ ಕೆಲ ನಾಯಕರ ಹೆಸರುಗಳು ಇವೆ ಎಂದು ಮೂಲಗಳಿಂದ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Bengaluruಜಾರಿ ನಿರ್ದೇಶನಾಲಯCrimeಅಪರಾಧMansoor Khanಐಎಂಎ ವಂಚನೆ ಪ್ರಕರಣಮನ್ಸೂರ್ ಖಾನ್IMA Ponzi scamED ಬೆಂಗಳೂರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


