ರಾಜ್ಯ

ಬೆಳಗಾವಿ: ಭೀಕರ ರಸ್ತೆ ಅಪಘಾತ,ಸ್ಥಳದಲ್ಲಿಯೇ ಐವರು ದುರ್ಮರಣ

ಬೆಳಗಾವಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ -4ರ ಶ್ರೀನಗರ ಬಳಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ಬೆಳಗಾವಿ: ಭೀಕರ ರಸ್ತೆ ಅಪಘಾತ,ಸ್ಥಳದಲ್ಲಿಯೇ ಐವರು ದುರ್ಮರಣ
ಅಪಘಾತದ ಚಿತ್ರ
Published On :

ಬೆಳಗಾವಿ: ಬೆಳಗಾವಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ -4ರ ಶ್ರೀನಗರ ಬಳಿ ಇಂದು ಸಂಭವಿಸಿದ   ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.  

ಕಾರಿನ ಟೈರ್ ಸ್ಪೋಟಗೊಂಡು ಲಾರಿಗೆ  ಡಿಕ್ಕಿ ಹೊಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರದಿಂದ ಬೆಳಗಾವಿಗೆ ಬರುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಐದು ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಘಟನೆಯಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಳ ಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.