ರಾಜ್ಯ

ಸಾಲು ಮರದ ತಿಮ್ಮಕ್ಕ ಅವರ ಮನವಿಗೆ ಸ್ಪಂದಿಸಿದ ಸಿಎಂ: ಮರ ಕಡಿಯದಂತೆ ಅಧಿಕಾರಿಗಳಿಗೆ ಸೂಚನೆ

ಕುಂದೂರು-ಹುಲಿಕಲ್ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಯೋಜನೆಗೆ ಬ್ರೇಕ್ ಬಿದ್ದಿದೆ. ಸೋಮವಾರ ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಮುಖ್ಯಮಂತ್ರಿ...

ಸಾಲು ಮರದ ತಿಮ್ಮಕ್ಕ ಅವರ ಮನವಿಗೆ ಸ್ಪಂದಿಸಿದ ಸಿಎಂ: ಮರ ಕಡಿಯದಂತೆ ಅಧಿಕಾರಿಗಳಿಗೆ ಸೂಚನೆ
ಸಾಲುಮರದ ತಿಮ್ಮಕ್ಕನಿಂದ ಸಿಎಂ ಕುಮಾರಸ್ವಾಮಿ ಭೇಟಿ
Published On :
ಬೆಂಗಳೂರು: ಕುಂದೂರು-ಹುಲಿಕಲ್ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಯೋಜನೆಗೆ ಬ್ರೇಕ್ ಬಿದ್ದಿದೆ. ಸೋಮವಾರ ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರನ್ನು  ಗೃಹ ಕಛೇರಿ ಕೃಷ್ಣದಲ್ಲಿ ಭೇಟಿ ಮಾಡಿದರು. ಈ ವೇಳೆ ಮಾಗಡಿ ತಾಲೂಕು ಕುದೂರು-ಹುಲಿಕಲ್ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ನೆಪದಲ್ಲಿ ತಾನು ನೆಟ್ಟ ಸಾಲುಮರಗಳ ಕಡಿಯಲು ಮುಂದಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ.
ಈ ತಕ್ಷಣ ಸಿಎಂ ಕುಮಾರಸ್ವಾಮಿ ಸಂಬಂಧಿಸಿದ ಅಧಿಕಾರಿಗಳ ಜತೆ ಮಾತನಾಡಿ ಮರಗಳನ್ನು ಕಡಿಯದಂತೆ ಆದೇಶಿಸಿದ್ದರೆ. ಅಲ್ಲದೆ ಅಗತ್ಯವಾದರೆ ರಸ್ತೆ ಮಾರ್ಗ ಬದಲಿಸುವಂತೆ ಸಹ ಸೂಚಿಸಿದ್ದಾರೆ.
ರಸ್ತೆ ಕಾಮಗಾರಿ ನೆಪದಲ್ಲಿ ತಿಮ್ಮಕ್ಕ ನೆಟ್ಟ ಸಾಲುಮರಗಳಿಗೆ ಕೊಡಲಿ ಏಟು ನೀಡಲು ಸರ್ಕಾರ ಮುಂದಾದ ಕುರಿತಂತೆ ಮಾಧ್ಯಮಗಳಲ್ಲಿ ವರದಿ ಪ್ರಸಾರವಾದ ಬೆನ್ನಿಗೇ ಸಿಎಂ ಕುಮಾರಸ್ವಾಮಿ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.