ಬೆಚ್ಚಿ ಬಿದ್ದ ಕಲಬುರಗಿ: ಪಲ್ಲಂಗದಾಟದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದವರನ್ನು ಕೊಚ್ಚಿ ಬರ್ಬರ ಹತ್ಯೆ!
ಪಲ್ಲಂಗದಾಟದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಇಬ್ಬರನ್ನು ಸಂಬಂಧಿಕರೇ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

Published On :
ಕಲಬುರಗಿ: ಪಲ್ಲಂಗದಾಟದ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಇಬ್ಬರನ್ನು ಸಂಬಂಧಿಕರೇ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಕಲಬುರಗಿ ತಾಲೂಕಿನ ಬೆಳಗುಂಪಾ ಗ್ರಾಮದ 40 ವರ್ಷದ ಶಂಕರ್ ಮ್ಯಾಕೇರಿ ಮತ್ತು 30 ವರ್ಷದ ಮಡೆಮ್ಮ ಭೀಮಾಶಂಕರ ಮಾಂಗರನ್ನು ಇಬ್ಬರು ಜೊತೆಯಲ್ಲಿರುವಾಗಲೇ ಸಂಬಂಧಿಕರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಈ ವೇಳೆ ಆಕ್ರೋಶಗೊಂಡ ಸಂಬಂಧಿಕರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಹಲವು ವರ್ಷಗಳಿಂದ ಇಬ್ಬರು ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಹೇಳಲಾಗಿದೆ. ಇನ್ನು ಇಬ್ಬರೂ ವಿವಾಹಿತರಾಗಿದ್ದು ಇಬ್ಬರಿಗೂ ತಲಾ ಎರಡು ಮಕ್ಕಳಿವೆ. ಮಡೆಮ್ಮಳನ್ನು ಪತಿ ಬಿಟ್ಟು ಹೋಗಿದ್ದರಿಂದ ಆಕೆ ಬೆಳಗುಂಪಾದಲ್ಲೇ ಸಹೋದರ ಸಂಬಂಧಿಕರ ಜತೆ ವಾಸವಾಗಿದ್ದಳು. ಅದೇ ಗ್ರಾಮದ ಶಂಕರ ಮ್ಯಾಕೇರಿ ಪರಿಚಯವಾಗಿ ಪ್ರೇಮಕ್ಕೆ ತಿರುಗಿದೆ. ಇಬ್ಬರು ವಿವಾಹವಾಗಿದ್ದರಿಂದ ಅನೈತಿಕ ಸಂಬಂಧ ಇರಿಸಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


