ರಾಜ್ಯ

ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕ ಸತ್ಯನಾರಾಯಣ ನಿಧನ

ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕ ಎಂ.ಸತ್ಯನಾರಾಯಣ (74) ನಿಧನರಾಗಿದ್ದಾರೆ.ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯನಾರಾಯಣ ಗುರುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕ ಸತ್ಯನಾರಾಯಣ ನಿಧನ
ಎಂ.ಸತ್ಯನಾರಾಯಣ
Published On :
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕ ಎಂ.ಸತ್ಯನಾರಾಯಣ (74) ನಿಧನರಾಗಿದ್ದಾರೆ.ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯನಾರಾಯಣ ಗುರುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಅನಾರೋಗ್ಯಪೀಡಿತರಾಗಿದ್ದ ಮಾಜಿ ಶಾಸಕರನ್ನು ಕೆಲ ದಿನಗಳ ಹಿಂದೆ ಮೈಸೂರು ಇಲವಾಲ ಸಮೀಪದ ನಂಜಮ್ಮ ಜವರೇಗೌಡ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಕುಟುಂಬಿಕರು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತರಾಗಿದ್ದ ಸತ್ಯನಾರಾಯಣ ಮೈಸೂರು ತಾಲೂಕು ಗುಂಗ್ರಾಲ್ ಛತ್ರ ಗ್ರಾಮದವರಾಗಿದ್ದರು.ಸಿದ್ದರಾಮಯ್ಯ ಹಾಗೂ ಸತ್ಯನಾರಾಯಣ ಇಬ್ಬರೂ ಒಂದೇ ಅವಧಿಯಲ್ಲಿ ಮೈಸೂರು ತಾಲೂಕು ಬೋರ್ಡ್ ಸದಸ್ಯರಾಗಿದ್ದು 2008ರ ವಿಧಾನ ಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾದರು.
ಇಲವಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು ಪತ್ನಿ ಲಕ್ಷ್ಮೀದೇವಿ, ಪುತ್ರರಾದ ಅರುಣ್‍ಕುಮಾರ್ (ಜಿಪಂ ಸದಸ್ಯ), ಜಗದೀಶ್, ಪುತ್ರಿ ಸುನಿತಾ ಸೇರಿ ಅಪಾರ ಬಂಧು, ಮಿತ್ರರನ್ನು ಅಗಲಿದ್ದಾರೆ.
ಮೃತರ ಪಾರ್ಥಿವ ಶರೀರವನ್ನು  ಗುಂಗ್ರಾಲ್ ಛತ್ರದ ನಿವಾಸದ ಬಳಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದ್ದು ಶುಕ್ರವಾರ ಮಧ್ಯಾಹ್ನ  3ಕ್ಕೆ ಅಂತ್ಯಸಂಸ್ಕಾರ ನೆರವೇರಲಿದೆ 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.