ವಿಜಯಪುರ: ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ, ಹಾಕಿ ಅವಮಾನ!
ದೇವಾಲಯದಲ್ಲಿರುವ ಶಿವನ ವಾಹನ ನಂದಿ ವಿಗ್ರಹಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅವಮಾನವೆಸಗಿದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಗೋಳಸಂಗಿ ಗ್ರಾಮದಲ್ಲಿ ನಡೆದಿದೆ.

Published On :
ವಿಜಯಪುರ: ದೇವಾಲಯದಲ್ಲಿರುವ ಶಿವನ ವಾಹನ ನಂದಿ ವಿಗ್ರಹಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅವಮಾನವೆಸಗಿದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಗೋಳಸಂಗಿ ಗ್ರಾಮದಲ್ಲಿ ನಡೆದಿದೆ.
ಶನಿವಾರ ಬೆಳಗಿನ ಜಾವ ಎಂದಿನಂತೆ ದೇವಾಲಯದ ಅರ್ಚಕರು ಪೂಜೆಗಾಗಿ ದೇವಾಲಯಕ್ಕೆ ಆಗಮಿಸಿದ್ದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಬಳಿಕ ದೇವಾಲಯದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ ಹಾಕಿ ಅವಮಾನಿಸಿದ್ದಾರೆ.
ಕಿಡಿಗೇಡಿಗಳ ಈ ಕೃತ್ಯಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಕೂಡಗಿ ಎನ್ ಟಿಪಿಸಿ ಪೊಲೀಸ್ ಠಾಣೆ ಪಿಎಸ್‍ಐ ಬಸವರಾಜ್ ಆಗಮಿಸಿ ಪರಿಶೀಲಿಸಿದ್ದಾರೆ.
ಕೃತ್ಯ ನಡೆಸಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಶಿಕ್ಷಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ..
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


