ಕುಮಾರಸ್ವಾಮಿ ಗ್ರಾಮ ವಾಸ್ತವ್ಯ; ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಥಳ ಪರಿಶೀಲನೆ
ಹಳ್ಳಿಗಳಲ್ಲಿ ವಾಸ್ತವ್ಯ ಮಾಡಿ ಅಲ್ಲಿನ ಸಮಸ್ಯೆಗಳನ್ನು ಅರಿಯಲು ಮುಂದಾಗಲು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ...

Published On :
ಕಲಬುರಗಿ: ಹಳ್ಳಿಗಳಲ್ಲಿ ವಾಸ್ತವ್ಯ ಮಾಡಿ ಅಲ್ಲಿನ ಸಮಸ್ಯೆಗಳನ್ನು ಅರಿಯಲು ಮುಂದಾಗಲು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಗ್ರಾಮ ವಾಸ್ತವ್ಯ ಇದೇ ತಿಂಗಳ 21ರಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಚಂಡರಕಿ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಜೂನ್ 22ರಿಂದ ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಗ್ರಾಮ ವಾಸ್ತವ್ಯ ಅಭಿಯಾನ ಮುಂದುವರಿಸಲಿದ್ದಾರೆ. ಜೂನ್ 22ರಂದು ಅಫಜಲ್ಪುರ್ ತಾಲೂಕಿನ ಹೆರೂರ್ ( ಬಿ) ಗ್ರಾಮದಲ್ಲಿ ಮುಖ್ಯಂತ್ರಿಗಳು ಗ್ರಾಮ ವಾಸ್ತವ್ಯ ಮಾಡಲಿದ್ದು, ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮ, ಭದ್ರತೆ ಇತ್ಯಾದಿ ಕುರಿತು ಅಧಿಕಾರಿಗಳಿಗೆ ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


