ರಾಜ್ಯ

ಹೆಲ್ಮೆಟ್ ಇಲ್ಲದೆ ಅತಿವೇಗದಲ್ಲಿ ರೈಡಿಂಗ್: ನಿಯಂತ್ರಣ ತಪ್ಪಿ ಬೈಕ್ ಸವಾರ ದುರ್ಮರಣ!

ಹೆಲ್ಮೆಟ್ ಹಾಕದೆ ವೇಗವಾಗಿ ಬೈಕ್ ಚಲಾಯಿಸಿದ್ದು ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸವಾರನ ತಲೆ ರಸ್ತೆಗೆ ಬಡಿದು ಆತ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಹೆಲ್ಮೆಟ್ ಇಲ್ಲದೆ ಅತಿವೇಗದಲ್ಲಿ ರೈಡಿಂಗ್: ನಿಯಂತ್ರಣ ತಪ್ಪಿ ಬೈಕ್ ಸವಾರ ದುರ್ಮರಣ!
ಸಂಗ್ರಹ ಚಿತ್ರ
Published On :
ಶಿರಸಿ: ಹೆಲ್ಮೆಟ್ ಹಾಕದೆ ವೇಗವಾಗಿ ಬೈಕ್ ಚಲಾಯಿಸಿದ್ದು ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸವಾರನ ತಲೆ ರಸ್ತೆಗೆ ಬಡಿದು ಆತ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಝೂ ಸರ್ಕಲ್ ಬಳಿ 25 ವರ್ಷದ ಆಸಿಫ್ ಶುಕುರ್ ಶೇಖ್ ತನ್ನ ತಾಯಿಯನ್ನು ಬೈಕ್ ನಲ್ಲಿ ಕೂರಿಸಿಕೊಂಡು ವೇಗವಾಗಿ ಹೋಗುತ್ತಿದ್ದ ಈ ವೇಳೆ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. 
ಅಪಘಾತದಲ್ಲಿ ತಾಯಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಆದರೆ ತನ್ನ ಕಣ್ಣ ಮುಂದೆ ತನ್ನ ಮಗ ಸಾವನ್ನಪ್ಪಿರುವುದು ಕಂಡ ಆ ತಾಯಿಯ ಹೃದಯ ಒಡೆದು ಹೋದಂತಾಗಿತ್ತು. ಅವರನ್ನು ಎಷ್ಟೇ ಸುಧಾರಿಸಿದರು ಆಕೆ ಅಳುತ್ತಲೆ ಇದ್ದರು. 
ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.