ಸಾಂಸ್ಕೃತಿಕ ರಾಯಬಾರಿಯನ್ನು ಕಳೆದುಕೊಂಡಿದ್ದೇವೆ: ಮುಖ್ಯಮಂತ್ರಿ ಸೇರಿ ಹಲವು ಗಣ್ಯರ ಸಂತಾಪ
ಹಿರಿಯ ಸಾಹಿತಿ, ನಟ, ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್ . ಡಿ. ಕುಮಾರಸ್ವಾಮಿ ಸೇರಿದಂತೆ ವಿವಿಧ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Published On :
ಬೆಂಗಳೂರು: ಹಿರಿಯ ಸಾಹಿತಿ, ನಟ, ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್ . ಡಿ. ಕುಮಾರಸ್ವಾಮಿ ಸೇರಿದಂತೆ ವಿವಿಧ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರ ನಿಧನದ ಸುದ್ದಿ ಕೇಳಿ ತುಂಬಾ ದುಃಖವಾಗಿದೆ. ಸಾಹಿತ್ಯ, ರಂಗಭೂಮಿ, ಸಿನಿಮಾ ಕ್ಷೇತ್ರಕ್ಕೆ ಅವರ ಕೊಡುಗೆ ಅನುಪಮವಾಗಿದ್ದು, ಯಾವಾಗಲೂ ನೆನಪಿನಲ್ಲಿ ಉಳಿಯುವಂತಾಗಿದೆ.ಅವರ ನಿಧನದಿಂದಾಗಿ ನಾವು ಸಾಂಸ್ಕೃತಿಕ ರಾಯಬಾರಿಯನ್ನು ಕಳೆದುಕೊಂಡಿದ್ದೇವೆ ಎಂದು ಕುಮಾರಸ್ವಾಮಿ ಟ್ವೀಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.
ಕನ್ನಡ ಮತ್ತು ಭಾರತ ಸಾಹಿತ್ಯ ಹಾಗೂ ನಾಟಕ ಲೋಕಕ್ಕೆ ಇದು ತುಂಬಲಾರದ ನಷ್ಟ. ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಟ್ವೀಟ್ ಮಾಡಿದ್ದಾರೆ.
ಕನ್ನಡ ಮತ್ತು ಭಾರತ ಸಾಹಿತ್ಯ ಹಾಗೂ ನಾಟಕ ಲೋಕಕ್ಕೆ ಇದು ತುಂಬಲಾರದ ನಷ್ಟ. ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
ಹಿರಿಯ ಸಾಹಿತಿ,ಚಿಂತಕ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ನಿಧನದಿಂದ ನಾಡಿನ ಬಹುಮುಖ್ಯ ಸಾಕ್ಷಿಪ್ರಜ್ಞೆಯ ದನಿ ಮೌನವಾದಂತಾಗಿದೆ. ಈ ದುರಿತದ ಕಾಲದಲ್ಲಿ ಅವರು ನಮ್ಮೊಡನೆ ಇನ್ನಷ್ಟು ಕಾಲ ಇರಬೇಕಿತ್ತು. ಅವರ ಸಾವಿನ ಶೋಕದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
SiddaramaiahHD KumaraswamyGirish Karnadಡಾ. ಜಿ. ಪರಮೇಶ್ವರ್Dr.G.Parameshwarವಿಧಿ ವಶಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿDimiseCondolence ಗಿರೀಶ್ ಕಾರ್ನಾಡ್ಸಿದ್ದರಾಮಯ್ಯ ಸಂತಾಪ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


