ಚಾಮರಾಜನಗರ: ದೇವಸ್ಥಾನದಲ್ಲಿ ದಲಿತ ವ್ಯಕ್ತಿ ಮೆರವಣಿಗೆ, ತಪ್ಪಿತಸ್ಥರಿಗೆ ತಕ್ಕ ಶಾಸ್ತಿ ಮಾಡಲು ಸಿಎಂ ಸೂಚನೆ
ದೇವರ ಮೂರ್ತಿಯನ್ನು ನಾಶಪಡಿಸಲು ಹೊರಟಿದ್ದ ಎಂಬ ಆರೋಪದ ಮೇಲೆ...

Published On :
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲು ಪೇಟೆ ತಾಲೂಕಿನಲ್ಲಿ ದಲಿತ ವ್ಯಕ್ತಿಯನ್ನು ಥಳಿಸಿ ಅರೆಬೆತ್ತಲೆ ಮಾಡಿ ಮೆರವಣಿಗೆ ಮಾಡಿದ ವ್ಯಕ್ತಿಗಳ ವಿರುದ್ಧ ಕೂಡಲೇ ಕ್ರಮ ಜರುಗಿಸಬೇಕು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಈ ಘಟನೆ ಕುರಿತು ಟ್ವೀಟ್ ಮಾಡಿರುವ ಅವರು, ಇದು ನಿಜಕ್ಕೂ ಮನಕಲಕುವ ಮತ್ತು ಅಮಾನವೀಯ ಘಟನೆ ಎಂಬುದರಲ್ಲಿ ಬೇರೆ ಮಾತೇ ಇಲ್ಲ, ಇದಕ್ಕೆ ಕಾರಣರಾದವರು ಎಷ್ಟೇ ದೊಡ್ಡವರಿರಲಿ, ಅವರ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕು ಎಂದು ಕಟ್ಟಪ್ಪಣೆ ಮಾಡಿದ್ದಾರೆ.
ಈ ಘಟನೆಗೆ ಸಂಬಂಧಪಟ್ಟಂತೆ ಚಾಮರಾಜನಗರ ಜಿಲ್ಲಾ ಪೊಲೀಸರು ದೇವಸ್ಥಾನದ ಅರ್ಚಕ ಸೇರಿದಂತೆ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ.
ದೇವಾಲಯಗಳ ವಿಗ್ರಹಗಳನ್ನು ಹಾನಿ ಮಾಡಿದ್ದಾನೆ ಎಂಬ ಕಾರಣದಿಂದ ದಲಿತ ಯುವಕ ಪ್ರತಾಪ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ನಂತರ ಆತನನ್ನು ಅರೆಬೆತ್ತಲೆ ಮಾಡಿ ಮರವಣಿಗೆ ಮಾಡಿರುವುದಕ್ಕೆ ನಾಡಿನಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಈ ಕುರಿತು ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಶನೀಶ್ವರ ದೇವಸ್ಥಾನದ ಅರ್ಚಕ ಚಂದ್ರಪ್ಪ, ಆತ ದೇವಸ್ಥಾನ ಹತ್ತಿರ ಬಂದಾಗ ನಾನು ನೀರು ಕೊಟ್ಟೆ. ಆತ ದೇವಸ್ಥಾನದೊಳಗೆ ಬರಲು ಕೇಳಿದ್ದ. ಆತನನ್ನು ಬರಲು ಹೇಳಿದಾಗ ಹಠಾತ್ತಾಗಿ ನನ್ನ ಅಂಗಿ ಕಾಲರ್ ಹಿಡಿದು ಬಾಯಿಗೆ ಬಂದಂತೆ ನಿಂದಿಸಲು ಆರಂಭಿಸಿದ. ಆತ ದೇವಸ್ಥಾನಕ್ಕೆ ಬರುವಾಗಲೇ ಮೈ ಮೇಲೆ ಬಟ್ಟೆ ಇರಲಿಲ್ಲ. ಆತನಿಗೆ ನಾವು ಲುಂಗಿ ಕೊಟ್ಟೆವು. ಆತ ಮಾನಸಿಕವಾಗಿ ಸ್ಥಿಮಿತ ಹೊಂದಿಲ್ಲ ಎಂದು ಅನಿಸುತ್ತದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಚಾಮರಾಜನಗರಬೆತ್ತಲೆ ಮೆರವಣಿಗೆManNakedtemple priestಪರಿಶಿಷ್ಟ ಜಾತಿScheduled CasteChamarajanagaraChandrappaಚಂದ್ರಪ್ಪದೇವಸ್ಥಾನ ಅರ್ಚಕ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


