ನೀವು ನಟಿ ಅಷ್ಟೇ, ಚಿತ್ರಗಳಲ್ಲಿ ಮಾತ್ರ ಅಭಿನಯಿಸಿಕೊಂಡಿರೀ; ಹರ್ಷಿಕಾಗೆ ಸಚಿವ ಸಾ.ರಾ ಮಹೇಶ್ ಟಾಂಗ್!
ಡಿಬಾಸ್ ಅಂತೆ ಡಿಬಾಸ್ ಯಾರು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪ್ರಶ್ನಿಸಿದ್ದರು. ಇದರ ಬೆನ್ನಲ್ಲೇ ಇದೀಗ ನಟಿ ಹರ್ಷಿಕಾ ಪೂಣಚ್ಚ ಯಾರು...

Published On :
ಮೈಸೂರು: ಡಿಬಾಸ್ ಅಂತೆ ಡಿಬಾಸ್ ಯಾರು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪ್ರಶ್ನಿಸಿದ್ದರು. ಇದರ ಬೆನ್ನಲ್ಲೇ ಇದೀಗ ನಟಿ ಹರ್ಷಿಕಾ ಪೂಣಚ್ಚ ಯಾರು ಎಂದು ಮೈತ್ರಿ ಸರ್ಕಾರದ ಸಚಿವ ಸಾ.ರಾ ಮಹೇಶ್ ಪ್ರಶ್ನಿಸಿದ್ದಾರೆ.
ಕೊಡಗು ಸಂತ್ರಸ್ತರ ಮನೆಗಳ ಗುಣಮಟ್ಟದ ಬಗ್ಗೆ ನಟಿ ಹರ್ಷಿಕಾ ಪೂಣಚ್ಚ ಆಕ್ಷೇಪ ವ್ಯಕ್ತಪಡಿಸಿದ್ದು ಇದಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ ಮಹೇಶ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹರ್ಷಿಕಾಗೆ ಏನಾಗಿದೆ. ಆಕೆ ನಟಿಯಷ್ಟೇ. ಅವರು ಸಿನಿಮಾಗಳಲ್ಲಿ ಮಾತ್ರ ಅಭಿನಯಿಸಿಕೊಂಡಿರಬೇಕು. ಅದನ್ನು ಬಿಟ್ಟು ಬೇರೆ ಏನನ್ನು ಮಾತನಾಡಬಾರದು ಎಂದು ಹೇಳಿದ್ದಾರೆ.
ಕೊಡಗು ಸಂತ್ರಸ್ತರ ಮನೆಗಳ ಬಗ್ಗೆ ಹರ್ಷಿಕಾಗೆ ಏನು ಗೊತ್ತು? ಅವರ ವಿದ್ಯಾಭ್ಯಾಸದ ಹಿನ್ನಲೆ ಏನು? ವಾಸ್ತವ ಅರ್ಥ ಮಾಡಿಕೊಳ್ಳದೆ ತಜ್ಞರಂತೆ ಮಾತನಾಡಬಾರದು ಎಂದು ಸಾರಾ ಮಹೇಶ್ ಕಿಡಿಕಾರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


