ಯಡಿಯೂರಪ್ಪ ಆಡಿಯೋ ಸಿಡಿ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್
ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಇತರೆ ಮೂವರ ವಿರುದ್ಧದ ಆಡಿಯೋ ಸಿಡಿ ಪ್ರಕರಣದ ವಿಚಾರಣೆಯನ್ನು ಕಲಬುರ್ಗಿ ಹೈಕೋರ್ಟ್ ಪೀಠ ಮುಂದೂಡಿದೆ.

Published On :
ಕಲಬುರ್ಗಿ: ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಇತರೆ ಮೂವರ ವಿರುದ್ಧದ ಆಡಿಯೋ ಸಿಡಿ ಪ್ರಕರಣದ ವಿಚಾರಣೆಯನ್ನು ಕಲಬುರ್ಗಿ ಹೈಕೋರ್ಟ್ ಪೀಠ ಮುಂದೂಡಿದೆ.
ಆಡಿಯೋ ಪ್ರಕರಣದ ಮಧ್ಯಂತರ ತಡೆಯಾಜ್ಞೆ ತೆರವು ಪ್ರಕರಣ ವಿಚಾರಣೆ ಕಲಬುರ್ಗಿ ಪೀಠದಲ್ಲಿ ನಡೆಯುತ್ತಿದ್ದು ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಜುಲೈ 1ಕ್ಕೆ ನಿಗದಿಪಡಿಸಿದೆ.
ನ್ಯಾಯಮೂರ್ತಿ ಅಶೋಕ ಜಿ. ನಿಜಗುಣನವರ್ ಅವರನ್ನೊಳಗೊಂಡ ಪೀಠ ಸೋಮವಾರ ಈ ಸಂಬಂಧ ವಿಚಾರಣೆ ನಡೆಸಿದೆ. ಚುನಾವಣೆ ವೆಚ್ಚಕ್ಕಾಗಿ 10 ಕೋಟಿ ರು. ಲಂಚ ನೀಡುವುದಾಗಿ ಆಮಿಷ ಒಡ್ಡಿದ್ದರೆನ್ನಲಾಗಿರುವ ಯಡಿಯೂರಪ್ಪ ಅವರ ಧ್ವನಿಯನ್ನೊಳಗೊಂಡ ಆಡಿಯೋ ಸಿಡಿ ಪ್ರಕರಣ ಇದಾಗಿದೆ. ಶರಣಗೌಡ ನಾಗನಗೌಡ ಕಂದಕೂರ ಎಂಬುವವರು ಈ ಸಂಬಂಧ ಸೂಕ್ತ ತನಿಖೆಗಾಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದರು.
ವಿಧಾನಸಭೆ ಚುನಾವಣೆ ವೇಳೆ ಯಡಿಯೂರಪ್ಪ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದ್ದು ಪ್ರಕರಣದಲ್ಲಿ ಕೋರ್ಟ್ ವಿಧಿಸಿರುವ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದಾರೆ.
ಇವರ ವಾದ ಮುಗಿಯುವ ಬೇಳೆಗೆ ಕೋರ್ಟ್ ಅವಧಿ ಮುಕ್ತಾಯದ ಸನಿಹ ಬಂದ ಕಾರಣ ನ್ಯಾಯಾಲಯ ಯಡಿಯೂರಪ್ಪ ಹಾಗೂ ಇತರೆ ಮೂವರ ಪರ ವಕೀಲರ ವಾದವನ್ನು ಜುಲೈ 1ರಂದು ಆಲಿಸುವುದಾಗಿ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Yeddyurappaಯಡಿಯೂರಪ್ಪKalaburgi High Court benchYeddyurappa audio tape caseಕಲಬುರ್ಗಿ ಹೈಕೋರ್ಟ್ ಪೀಠಯಡಿಯೂರಪ್ಪ ಆಡಿಯೋ ಟೇಪ್ ಪ್ರಕರಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


