ಮಂಡ್ಯ: ಸಾಲಬಾಧೆ ತಾಳದೆ ಅಂತ್ಯಸಂಸ್ಕಾರಕ್ಕೆ ಬರುವಂತೆ ಸಿಎಂಗೆ ವೀಡಿಯೋ ಸಂದೇಶ ಕಳಿಸಿ ರೈತ ಆತ್ಮಹತ್ಯೆ!
ತನ್ನ ಅಂತ್ಯಸಂಸ್ಕಾರಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವ ನ್ನು ಆಹ್ವಾನಿಸಿ ವೀಡಿಯೋ ಸಂದೇಶ ಕಳಿಸಿದ ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ....

Published On :
ಮಂಡ್ಯ: ತನ್ನ ಅಂತ್ಯಸಂಸ್ಕಾರಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರನ್ನು ಆಹ್ವಾನಿಸಿ ವೀಡಿಯೋ ಸಂದೇಶ ಕಳಿಸಿದ ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ, ಸಂತೇಬಾಚಳ್ಳಿ ಹೋಬಳಿಯ ಅಘಲಯ ಗ್ರಾಮದಲ್ಲಿ ನಡೆದಿದೆ.
ಸಾಲಬಾಧೆ ತಾಳಲಾಗದೆ ಸುರೇಶ್ (45) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದು ಇದಕ್ಕೆ ಮುನ್ನ ಆವರು ಸಿಎಂ ಕುಮಾರಸ್ವಾಮಿ ಅವರಿಗೆ ತನ್ನ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿ ಎಂದು ವಿಡಿಯೋ ಸಂದೇಶ ರವಾನಿಸಿದ್ದಾರೆ.
ಮುಖ್ಯಂತ್ರಿ ಕುಮಾರಸ್ವಾಮಿ ಅಭಿಮಾನಿಯಾಗಿದ್ದ ಸುರೇಶ್ "ನಮ್ಮಂತ ಬಡ ರೈತರನ್ನು ಕಾಪಾಡಿ" ಎಂದು ಸಿಎಂಗೆ ಮನವಿ ಮಡಿದ್ದಾರೆ.
ರೈತ ಸುರೇಶ್ ಸೆಲ್ಫಿ ವೀಡಿಯೋ ಮಾಡಿದ್ದು"ಸಂತೇಬಾಚಹಳ್ಳಿಯಲ್ಲಿರುವ ಎಲ್ಲಾ ಕೆರೆಕಟ್ಟೆಗಳನ್ನು ನೀರಿನಿಂದ ತುಂಬಿಸಿ ರೈತರನ್ನು ಕಾಪಾಡಿ. ನೀವು ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಯಾಗಿದ್ದು ನನ್ನ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಬೇಕು.ರೈತರ ವಿಚಾರವಾಗಿ ಆಶ್ವಾಸನೆ ಮಾತ್ರ ನೀಡದೆ ನಿಜವಾಗಿ ಸಮಸ್ಯೆಗಳನ್ನು ಪರಿಹರಿಸುತ್ತೀರಿ ಎಂದು ನಂಬಿದ್ದೇನೆ" ಎಂದಿದ್ದಾರೆ.
ಭಾನುವಾರ ಬೆಳಗ್ಗೆ ರೈತ ಸುರೇಶ್ ತಮ್ಮ ಜಮೀನಿನ ಸಮೀಪ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾರೆ. ರೈತನ ಅಂತ್ಯ ಸಂಸ್ಕಾರ ನಡೆದ ತರುವಾಯ ಈ ವೀಡಿಯೋ ಅವರ ಕುಟುಂಬದವರಿಗೆ ದೊರಕಿದ್ದು ಇದೀಗ ವೈರಲ್ ಆಗಿದೆ.
ಕೆಆರ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


