ಐಎಂಎ ವಂಚನೆ ಪ್ರಕರಣ: ಮನ್ಸೂರ್ ಖಾನ್‌ಗೆ ಇಡಿ ನೋಟಿಸ್
ಐಎಂಎ ವಂಚನೆ ಪ್ರಕರಣದ ರೂವಾರಿ, ಸಂಸ್ಥೆಯ ಮಾಲೀಕ ಮನ್ಸೂರ್ ಖಾನ್ ಹಾಗೂ ಇತರೆ ಏಳು ಜನರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ...

Published On :
ಬೆಂಗಳೂರು: ಐಎಂಎ ವಂಚನೆ ಪ್ರಕರಣದ ರೂವಾರಿ, ಸಂಸ್ಥೆಯ ಮಾಲೀಕ ಮನ್ಸೂರ್ ಖಾನ್ ಹಾಗೂ ಇತರೆ ಏಳು ಜನರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ನೋಟಿಸ್ ಜಾರಿ ಮಾಡಿದೆ.
ಐಎಂಎ ಜ್ಯುವೆಲ್ಲರಿ ಮಾಲೀಕ ಮನ್ಸೂರ್ ಖಾನ್ ಹಾಗೂ ಏಳು ಜನರ ವಿರುದ್ಧ ದೂರು ದಾಖಲಿಸಿದ್ದ ಇಡಿ, ಇದೀಗ ವಿಚಾರಣೆಗೆ ಹಾಜರಾಗುವಂತೆ ಆರೋಪಿಗಳಿಗೆ ನೋಟಿಸ್ ನೀಡಿದೆ.
ಫೆಮಾ ಕಾಯಿದೆ ಉಲ್ಲಂಘಿಸಿ ವಿದೇಶಿ ಹೂಡಿಕೆ, ವಿದೇಶಿ ವಿನಿಮಯ, ವಿದೇಶಿ ವಹಿವಾಟು ನಡೆಸಿದ ಆರೋಪದ ಮೇರೆಗೆ ನೊಟೀಸ್ ಜಾರಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮನ್ಸೂರ್ ಖಾನ್ ಹಾಗೂ ಇತರರ ವಿರುದ್ಧ ದೂರು ದಾಖಲಿಸಿದ್ದ ಇಡಿ ಅಧಿಕಾರಿಗಳು ನಿನ್ನೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಕೆಲವು ಮಾಹಿತಿ ಸಂಗ್ರಹಿಸಿದ ನಂತರ ಪ್ರಕರಣದ ಎಲ್ಲಾ ಆರೋಪಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಸಾವಿರಾರು ಹೂಡಿಕೆದಾರರಿಗೆ ಹಣ ಹಿಂದುರಿಗಿಸದೆ ಮನ್ಸೂರ್ ಖಾನ್ ವಿದೇಶಕ್ಕೆ ಪರಾರಿಯಾಗಿದ್ದು, ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಈ ತನಿಖಾ ತಂಡ ತನಿಖೆಯನ್ನು ತೀವ್ರಗೊಳಿಸಿದ್ದು, ನಿನ್ನೆ ಖಾನ್‌ನ ಮೂರನೇ ಪತ್ನಿಯ ಮನೆ ಮೇಲೆ ದಾಳಿ ನಡೆಸಿ, ಚಿನ್ನಾಭರಣ ವಶಪಡಿಸಿಕೊಂಡಿತ್ತು. 40,600 ಮಂದಿ ಐಎಂಎಯಲ್ಲಿ ಹೂಡಿಕೆ ಮಾಡಿರುವುದಾಗಿ ದೂರು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


