ಜಿಂದಾಲ್ ಸಚಿವ ಸಂಪುಟ ಉಪ ಸಮಿತಿಗೆ ಡಾ. ಜಿ.ಪರಮೇಶ್ವರ್ ಅಧ್ಯಕ್ಷರಾಗಿ ಆಯ್ಕೆ ಸಾಧ್ಯತೆ?
ಜಿಂದಾಲ್ ಸ್ಟೀಲ್ ಕಂಪನಿಗೆ ಭೂಮಿ ಪರಭಾರೆ ಮಾಡದ ಪ್ರಕರಣದ ಮರು ಪರಿಶೀಲನೆಗಾಗಿ ರಚಿಸಲಾಗಿರುವ ಸಂಪುಟ ಉಪ ಸಮಿತಿ ಅಧ್ಯಕ್ಷರಾಗಿ ಡಾ.ಜಿ ಪರಮೇಶ್ವರ್ ಅವರು ಆಯ್ಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

Published On :
ಬೆಂಗಳೂರು: ಜಿಂದಾಲ್ ಸ್ಟೀಲ್ ಕಂಪನಿಗೆ ಭೂಮಿ ಪರಭಾರೆ ಮಾಡದ ಪ್ರಕರಣದ ಮರು ಪರಿಶೀಲನೆಗಾಗಿ ರಚಿಸಲಾಗಿರುವ ಸಂಪುಟ ಉಪ ಸಮಿತಿ ಅಧ್ಯಕ್ಷರಾಗಿ ಡಾ.ಜಿ ಪರಮೇಶ್ವರ್ ಅವರು ಆಯ್ಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಜಿಂದಾಲ್ ಸ್ಟೀಲ್ ಕಂಪನಿಗೆ 3667 ಎಕರೆ ಜಮೀನು ಪರಭಾರೆ ಮಾಡಿದ ಪ್ರಕರಣವನ್ನು ಮರು ಪರಿಶೀಲನೆಗಾಗಿ ಸಂಪುಟ ಉಪ ಸಮಿತಿ ರಚನೆಗೆ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಆದರೆ ಸಮಿತಿ ಅಧ್ಯಕ್ಷರನ್ನು ನೇಮಕ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಸಂಪುಟ ಸಭೆ ವಹಿಸಿತ್ತು. ಈ ಸಂಪುಟ ಉಪ ಸಮಿತಿಗೆ ಸಿಎಂ ಕುಮಾರಸ್ವಾಮಿ ಅವರು ಡಾ. ಪರಮೇಶ್ವರ್ ಅವರನ್ನೇ ಅಧ್ಯರನ್ನಾಗಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಮುಖ್ಯಮಂತ್ರಿ ಕುಮರಸ್ವಾಮಿ ಅಳೆದೂ ತೂಗಿ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಅವರನ್ನೆ ಅಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಪರಮೇಶ್ವರ್ ಮುಖ್ಯಮಂತ್ರಿ ಎಚ್ ಡಿಕೆಗೆ ಪರಮಾಪ್ತರಾಗಿದ್ದು,ಅತ್ತ ಸಚಿವ ಡಿಕೆ ಶಿವಕುಮಾರ್ ಅವರಿಗೂ ಆಪ್ತರು ಎನ್ನಲಾಗಿದೆ. ಜೊತೆಗೆ ಯಾರನ್ನೂ ವಿರೋಧ ಕಟ್ಟಿಕೊಳ್ಳುವ ಜಾಯಮಾನದವರಲ್ಲ.ಹೀಗಾಗಿ ಪರಮೇಶ್ವರ್ ತಲೆಗೆ ವಿವಾದಿತ ಜಿಂದಾಲ್ ಜವಾಬ್ದಾರಿಯನ್ನು ಹೊರಿಸಲು ಕುಮಾರಸ್ವಾಮಿ ತೀರ್ಮಾನಿಸಲಿದ್ದಾರೆ ಎನ್ನಲಾಗಿದೆ.
ಒಂದು ವೇಳೆ ಸಂಪುಟ ಉಪ ಸಮಿತಿ ಜಿಂದಾಲ್ ಭೂಮಿ ಪರಭಾರೆ ಬಗ್ಗೆ ಏನೇ ತೀರ್ಮಾನ ಕೈಗೊಂಡರೂ ಅದು ಕಾಂಗ್ರೆಸ್ ಪಕ್ಷದ ಬುಡಕ್ಕೆ ಬರಲಿದ್ದು ತಮಗಾಗಲೀ ಅಥವಾ ತಮ್ಮ ಪಕ್ಷಕ್ಕಾಗಲೀ ಯಾವುದೇ ಸಮಸ್ಯೆ ಇಲ್ಲ ಎಂಬುದು ಕುಮಾರಸ್ವಾಮಿ ಲೆಕ್ಕಾಚಾರವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruಡಾ.ಜಿ ಪರಮೇಶ್ವರಕರ್ನಾಟಕ ಸರ್ಕಾರDr.G ParameshwarKarntaka GovernmentJindal Cabinet sub-committeeಜಿಂದಾಲ್ ಸಚಿವ ಸಂಪುಟ ಉಪ ಸಮಿತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


