ಮಳೆ ಹಿನ್ನೆಲೆ: ನಾಳಿನ ಸಿಎಂ ಎಚ್ ಡಿಕೆ ಗ್ರಾಮವಾಸ್ತವ್ಯ ರದ್ದು
ಮಳೆ ಹಿನ್ನೆಲೆಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿಯವರ ನಾಳಿನ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರದ್ದಾಗಿದೆ.

Published On :
ಯಾದಗಿರಿ: ಮಳೆ ಹಿನ್ನೆಲೆಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿಯವರ ನಾಳಿನ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರದ್ದಾಗಿದೆ.
ನಾಳೆ ಹೆರೂರು ಗ್ರಾಮದಲ್ಲಿ ನಿಗದಿಯಾಗಿದ್ದ ಗ್ರಾಮ ವಾಸ್ತವ್ಯ ರದ್ದಾಗಿದೆ. ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲೂಕಿನ ಹೆರೂರು ಬಿ ಗ್ರಾಮದಲ್ಲಿ ನಾಳೆ ಸಿಎಂ ಗ್ರಾಮವಾಸ್ತವ್ಯ ನಿಗದಿಯಾಗಿತ್ತು.
ಆದರೆ ಮಳೆಯ ಕಾರಣದಿಂದ ನಾಳಿನ ಗ್ರಾಮ ವಾಸ್ತವ್ಯ, ಜನತಾ ದರ್ಶನ ರದ್ದಾಗಿದೆ ಎಂದು ತಿಳಿದುಬಂದಿದೆ. ಕಲಬುರ್ಗಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿರುವ ಕಾರಣ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮುಂದೂಡಲಾಗಿದೆ.
ಇದೇ ವೇಳೆ ಇಂದು ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಚಂಡರಕಿಯಲ್ಲಿ ಗ್ರಾಮವಾಸ್ತವ್ಯ ಮಾಡಿದ್ದ ಕುಮಾರಸ್ವಾಮಿ ಜನರ ಅಹವಾಲುಗಳನ್ನು ಆಲಿಸಿದ ನಂತರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು, ವಿದ್ಯಾರ್ಥಿಗಳೊಡನೆ ಊಟ ಮಾಡಿದ್ದಾರೆ. ಬಳಿಕ ಶಾಲಾ ಕೊಠಡಿಯಲ್ಲೇ ನಿದ್ರೆಗೆ ಜಾರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


