ರಾಮನಗರ: ಮರಕ್ಕೆ ಕಾರು ಡಿಕ್ಕಿ, ಮದುವೆ ಮುಗಿಸಿ ಬರುತ್ತಿದ್ದ ಮೂವರ ದುರ್ಮರಣ
ಚಾಲಕನ ಅಜಾಗರೂಕತೆಯಿಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮಾಗಡಿ – ಕುಣಿಗಲ್ ರಸ್ತೆಯ ...

Published On :
ರಾಮನಗರ: ಚಾಲಕನ ಅಜಾಗರೂಕತೆಯಿಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮಾಗಡಿ – ಕುಣಿಗಲ್ ರಸ್ತೆಯ ಹುಚ್ಚನುಮೆಗೌಡನ ಪಾಳ್ಯದ ಬಳಿ ನಡೆದಿದೆ.
ಶ್ರೀಪತಿಹಳ್ಳಿಯ ನರಸಮ್ಮ (65), ತಾಳೆಕೆರೆಯ ಜಯಲಕ್ಷ್ಮಮ್ಮ (42) ಮತ್ತು ಕಾಮಸಾಗರದ ಕುಮಾರ್ (25) ಮೃತ ದುರ್ದೈವಿಗಳು. ಇಂದು ಬೆಳಗ್ಗಿನ ಜಾವ ಸುಮಾರು 3 ಗಂಟೆಗೆ ಈ ದುರ್ಘಟನೆ ನಡೆದಿದೆ. ಇಂಡಿಕಾ ಕಾರಿನಲ್ಲಿ ಒಟ್ಟು ಐವರು ಮಾಗಡಿಯ ಕರೇನಹಳ್ಳಿಗೆ ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದರು.
ಮದುವೆಗೆ ಮುಗಿಸಿ ಕಾರಿನಲ್ಲಿ ಹಿಂದಿರುಗುತ್ತಿದ್ದಾಗ ಹುಚ್ಚನುಮೆಗೌಡನ ಪಾಳ್ಯದ ಬಳಿ ಚಾಲಕನ ಅಜಾಗರೂಕತೆಯಿಂದ ವೇಗವಾಗಿ ಹೋಗಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


