ರಾಜ್ಯ

ಬೆಂಗಳೂರು: ಬೈಕ್ ಗೆ ಗುದ್ದಿದ ಕಾರು; 8 ತಿಂಗಳ ಮಗು ಸೇರಿ ನಾಲ್ವರ ಸಾವು

ಬೈಕ್ ಗೆಕಾರು ಡಿಕ್ಕಿ ಹೊಡೆದ ಪರಿಣಾಮ 8 ತಿಂಗಳ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಪಾಳ್ಯ ಗೇಟ್ ...

ಬೆಂಗಳೂರು: ಬೈಕ್ ಗೆ ಗುದ್ದಿದ ಕಾರು; 8 ತಿಂಗಳ ಮಗು ಸೇರಿ ನಾಲ್ವರ ಸಾವು
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಬೈಕ್ ಗೆಕಾರು ಡಿಕ್ಕಿ ಹೊಡೆದ ಪರಿಣಾಮ 8 ತಿಂಗಳ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಪಾಳ್ಯ ಗೇಟ್ ಬಳಿ ನಡೆದಿದೆ.
ಯಲಹಂಕದ ಶಿವಕೋಟೆ ಗ್ರಾಮದ ಪಾರ್ವತಮ್ಮ, ನಾಗವೇಣಿ, ಶಶಿಕುಮಾರ್ ಹಾಗೂ 8 ತಿಂಗಳ ಮಗು ಮೃತ ದುರ್ದೈವಿಗಳು. ಇನ್ನೋವಾ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಕೋಟೆ ಗ್ರಾಮದ ಪಾರ್ವತಮ್ಮ ಹಾಗೂ ಸಂಬಂಧಿಕರು ಬೀಗರ ಊಟಕ್ಕಾಗಿ ದೇವನಹಳ್ಳಿಯ ಪುಟ್ಟಪ್ಪನಗುಡಿ ಬೀದಿಗೆ ಹೋಗಿದ್ದರು. ಊಟ ಮುಗಿಸಿಕೊಂಡು ಮರಳುತ್ತಿರುವಾಗ ರಾಷ್ಟ್ರೀಯ ಹೆದ್ದಾರಿಯ ಕನ್ನಮಂಗಲಪಾಳ್ಯ ಗೇಟ್ ಬಳಿ ಈ ಘಟನೆ ನಡೆದಿದೆ.
ಇನ್ನು ನಾಲ್ವರು ಗಾಯಗೊಂಡಿದ್ದು ಪರಿಸ್ಥಿತಿ ಗಂಭೀರವಾಗಿದೆ,  ರ್ಯಾಶ್ ಮತ್ತು ಅಜಾಗರೂಕತೆಯೇ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಏರ್‍ಪೋರ್ಟ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನ ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.