ಕೆಂಪೇಗೌಡರಿಗೂ ನನಗೂ ವಿಶೇಷ ಬಾಂಧವ್ಯವಿದೆ: ಸಚಿವ ಡಿ.ಕೆ ಶಿವಕುಮಾರ್
ನಾಡಪ್ರಭು ಕೆಂಪೇಗೌಡರಿಗೂ ಮತ್ತು ನನಗೂ ವಿಶೇಷ ಬಾಂಧವ್ಯವಿದೆ, ಇತಿಹಾಸ ಮತ್ತು ಸಂಬಂಧವಿದೆ, ಆದರೆ ಅದನ್ನು ಇಲ್ಲಿ ಹಂಚಿಕೊಳ್ಳಲು ಬಯಸುವುದಿಲ್ಲ ...

Published On :
ಬೆಂಗಳೂರು: ನಾಡಪ್ರಭು ಕೆಂಪೇಗೌಡರಿಗೂ ಮತ್ತು ನನಗೂ ವಿಶೇಷ ಬಾಂಧವ್ಯವಿದೆ, ಇತಿಹಾಸ ಮತ್ತು ಸಂಬಂಧವಿದೆ, ಆದರೆ ಅದನ್ನು ಇಲ್ಲಿ ಹಂಚಿಕೊಳ್ಳಲು ಬಯಸುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿವಕುಮಾರ್ ಮಾತನಾಡಿದರು.
ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯದಲ್ಲಿರುವ ಕಾರಣ ಶಿವಕುಮಾರ್ ಮತ್ತು ಡಿಸಿಎಂ ಪರಮೇಶ್ವರ್ ಕಾರ್ಯಕ್ರಾಮದಲ್ಲಿ ಭಾಗವಹಿಸಿದ್ದರು
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ''ಕೆಂಪೇಗೌಡ ಯಾವುದೇ ಸಮುದಾಯದ ಸ್ವತ್ತಲ್ಲ ಕನಕ, ವಾಲ್ಮೀಕಿ, ಬಸವಣ್ಣ, ಕೆಂಪೇಗೌಡರನ್ನು ಆಯಾ ಜಾತಿಗೆ ಸೀಮಿತವಾಗಿಡುವ ಕೆಲಸ ನಿಲ್ಲಬೇಕು ಎಂದು ಅಭಿಪ್ರಾಯಪಟ್ಟರು.
ತುಮಕೂಕು ಸ್ಪಟಿಕಪುರ ಸಂಸ್ಥಾನದ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಚಂದ್ರಶೇಖರನಾಥ ಸ್ವಾಮೀಜಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


