ರಾಜ್ಯ

ಜುಲೈ 12ರಿಂದ 26ರವರೆಗೆ ವಿಧಾನಮಂಡಲ ಅಧಿವೇಶನ

ಜುಲೈ 12 ರಿಂದ ಜುಲೈ 26 ರವರೆಗೆ ವಿಧಾನ ಮಂಡಲದ ಮಳೆಗಾಲದ ಅಧಿವೇಶನ ನಡೆಯಲಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಅವರು ಶುಕ್ರವಾರ...

ಜುಲೈ 12ರಿಂದ 26ರವರೆಗೆ ವಿಧಾನಮಂಡಲ ಅಧಿವೇಶನ
ವಿಧಾನಸೌಧ
Published On :
ಬೆಂಗಳೂರು: ಜುಲೈ 12 ರಿಂದ ಜುಲೈ 26 ರವರೆಗೆ ವಿಧಾನ ಮಂಡಲದ ಮಳೆಗಾಲದ ಅಧಿವೇಶನ ನಡೆಯಲಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಅವರು ಶುಕ್ರವಾರ ತಿಳಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜುಲೈ 12ರಿಂದ 26ರವರೆಗೆ ಮುಂಗಾರು ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ ಎಂದರು.
ಎಸ್ ಟಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಕುರಿತು ಸಮಿತಿ ರಚನೆ ಮಾಡಬಹುದು ಅಥವಾ ಆಯೋಗ ರಚನೆ ಮಾಡಬಹುದೇ ಎಂಬುದರ ಕುರಿತು ವರದಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ ಎಂದರು.
ಇದೇ ವೇಳೆ, ರಾಜ್ಯ ಸರ್ಕಾರ ಮೋಡ ಬಿತ್ತನೆಗೆ ನಿರ್ಧರಿಸಿದ್ದು, ಜುಲೈ ಎರಡನೇ ವಾರದಲ್ಲಿ ಮೈಸೂರು  ಹಾಗೂ ಹುಬ್ಬಳ್ಳಿಯಲ್ಲಿ ಮೋಡ ಬಿತ್ತನೆ ನಡೆಸಲು ತೀರ್ಮಾನಿಸಿರುವುದಾಗಿ ಸಚಿವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.