ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವ್ಯಕ್ತಿ ನೇಣಿಗೆ ಶರಣು
ಮಾರಣಾಂತಿಕ ಕಾಯಿಲೆಗೆ ತುತ್ತಾಗಿರುವ ವಿಷಯ ತಿಳಿದು ಆಘಾತಗೊಂಡ ವ್ಯಕ್ತಿಯೋರ್ವ ಮನನೊಂದು ನೇಣಿಗೆ ಶರಣಾಗಿರುವ ಘಟನೆ ನಗರದ...

Published On :
ಬೆಂಗಳೂರು: ಮಾರಣಾಂತಿಕ ಕಾಯಿಲೆಗೆ ತುತ್ತಾಗಿರುವ ವಿಷಯ ತಿಳಿದು ಆಘಾತಗೊಂಡ ವ್ಯಕ್ತಿಯೋರ್ವ ಮನನೊಂದು ನೇಣಿಗೆ ಶರಣಾಗಿರುವ ಘಟನೆ ನಗರದ ವಿಕ್ಟೋರಿಯಾ ಆಸ್ಪತ್ರೆಯ ಟಿ ಬ್ಲಾಕ್ ನಲ್ಲಿ ಗುರುವಾರ ನಡೆದಿದೆ.
ರಾಘವೇಂದ್ರ(40) ನೇಣಿಗೆ ಶರಣಾದ ವ್ಯಕ್ತಿ. ಮೂಲತಃ ಬನ್ನೇರುಘಟ್ಟ ನಿವಾಸಿಯಾಗಿರುವ ರಾಘವೇಂದ್ರ ಅನಾರೋಗ್ಯಕ್ಕೀಡಾಗಿದ್ದರಿಂದ ಒಂದು ವಾರದ ಹಿಂದೆ ರಕ್ತ ಪರೀಕ್ಷೆಗಾಗಿ ರಕ್ತ ಮಾದರಿ ಕೊಟ್ಟು ಹೋಗಿದ್ದರು. ಗುರುವಾರ ರಕ್ತದ ವರದಿ ಪಡೆಯಲು ಬಂದಿದ್ದ ಆತನಿಗೆ ಮಾರಣಾಂತಿಕ ಕಾಯಿಲೆ ಇದೆ ಎಂದು ತಿಳಿದು ಬಂದಿದೆ. ಇದರಿಂದ ಮನನೊಂದ ಆತ ಆಸ್ಪತ್ರೆಯ ಶೌಚಾಲಯದಲ್ಲಿಯೇ ನೇಣಿಗೆ ಶರಣಾಗಿದ್ದಾನೆ.
ಈ ಕುರಿತು ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


