ಗ್ರಾಮ ವಾಸ್ಯವ್ಯದಿಂದ ಅಧಿಕಾರಿಗಳಿಗೆ ಹೊಸ ಅನುಭವ: ಸಿಎಂ ಹೆಚ್.ಡಿ. ಕುಮಾರಸ್ವಾಮಿ
ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಅಧಿಕಾರಿಗಳಿಗೆ ಒಂದು ಹೊಸ ಅನುಭವ ಕೊಡುತ್ತದೆ ಎಂದು ...

Published On :
ಬೀದರ್: ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಅಧಿಕಾರಿಗಳಿಗೆ ಒಂದು ಹೊಸ ಅನುಭವ ಕೊಡುತ್ತದೆ ಎಂದು ಮುಖ್ಯಮಂತ್ರಿ ಎ ಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬೀದರ್ ಜಿಲ್ಲೆಯ ಉಜಳಂಬದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಪೊಲೀಸ್ ಸಿಬ್ಬಂದಿಯಿಂದ ಜಿಲ್ಲಾಧಿಕಾರಿವರೆಗಿನ ಅಧಿಕಾರಿಗಳು ಬೆಳಗ್ಗೆಯಿಂದ ಸಂಜೆವರೆಗೆ ಜನರ ಜೊತೆಗಿದ್ದು ತಾಳ್ಮೆಯಿಂದ ಜನರ ನೋವು ಆಲಿಸುವುದನ್ನು, ಅವರು ಬದಲಾವಣೆ ಆಗುವುದನ್ನು ನಾನು ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಂಡಿದ್ದೇನೆ ಎಂದು ಹೇಳಿದರು.
ಈ ಗ್ರಾಮವಾಸ್ತವ್ಯ ಕಾರ್ಯಕ್ರಮದಿಂದ ಜನಸಾಮಾನ್ಯರಿಗೆ ಸ್ಪಂದಿಸುವಂತಹ ವಾತಾವರಣ ನಿರ್ಮಾಣವಾಗುತ್ತದೆ, ಜನತಾದರ್ಶನದಲ್ಲಿ ಹಾಗೂ ಅಹವಾಲು ಆಲಿಕೆಯಲ್ಲಿ ಅರ್ಜಿ ಸಲ್ಲಿಸಿದ ಜನರ ನೋವುಗಳಿಗೆ ಸ್ಪಂದಿಸಬೇಕಿರುವುದು ಸರ್ಕಾರದ ಜವಾಬ್ದಾರಿಯಾಗಿದೆ, ಸಾಮಾಜಿಕ ನ್ಯಾಯದ ಬಗ್ಗೆ ಚರ್ಚಿಸುವುದು ನಮ್ಮ ಕರ್ತವ್ಯವಾಗಿದೆ, ಈ ಗ್ರಾಮವಾಸ್ತವ್ಯ ಕಾರ್ಯಕ್ರಮ ರೂಪಿಸುವ ಮೂಲಕ ಸರ್ಕಾರವು ಒಂದು ಹೆಜ್ಜೆ ಮುಂದೆ ಹೋಗಿದೆ ಎಂದು ತಿಳಿಸಿದರು.
ಯಾದಗಿರಿ, ರಾಯಚೂರ ಹಾಗೂ ಬೀದರ ಜಿಲ್ಲೆಗಳಲ್ಲಿ ಮಾಡಿದ ಗ್ರಾಮವಾಸ್ತವ್ಯದಲ್ಲಿ ಬಂದ ಮನವಿಗಳ ಪೈಕಿ ಆಯಾ ಪ್ರದೇಶಗಳ ಮೂಲಭೂತ ಸೌಕರ್ಯಕ್ಕೆ ಸಂಬಂಧಿಸಿದ ಅರ್ಜಿಗಳು ಕೆಲವು ಇವೆ, ಸಾವಿರಾರು ಜನರು ಕುಟುಂಬದಲ್ಲಿರುವ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ, ಈ ಬಗ್ಗೆ ನಾವು ಗಮನ ಕೊಡುತ್ತೇವೆ ಎಂದು ಅವರು ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೀದರ್BidarHD Kumaraswamyofficialsಅಧಿಕಾರಿಗಳುjanata darshanಜನತಾ ದರ್ಶನಸಿಎಂ ಹೆಚ್ ಡಿ ಕುಮಾರಸ್ವಾಮಿಗ್ರಾಮ ವಾಸ್ತವ್ಯgrama vastavya
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


