ರಾಜ್ಯ

ಕುಣಿಗಲ್: ಭೀಕರ ರಸ್ತೆ ಅಪಘಾತ, ಕಾರು ಪಲ್ಟಿಯಾಗಿ ಏಳು ಮಂದಿ ದುರ್ಮರಣ

ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಏಳು ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ಕುಣಿಗಲ್ ತಾಲೂಕು ಸಿದ್ದಾಪುರ ಬಳಿ ನಡೆದಿದೆ.

ಕುಣಿಗಲ್: ಭೀಕರ ರಸ್ತೆ ಅಪಘಾತ, ಕಾರು ಪಲ್ಟಿಯಾಗಿ ಏಳು ಮಂದಿ ದುರ್ಮರಣ
ಕಾರು ಅಪಘಾತ
Published On :
ತುಮಕೂರು: ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಏಳು ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ಕುಣಿಗಲ್ ತಾಲೂಕು ಸಿದ್ದಾಪುರ ಬಳಿ ನಡೆದಿದೆ.
ಯಡಿಯೂರುನಿಂದ ಬೆಂಗಳೂರಿಗೆ ತೆರಳುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಘಟನೆಯಲ್ಲಿ ನಾಲ್ಕು ಮಹಿಳೆಯರು , ಒಬ್ಬ ಪುರುಷ ಸ್ಥಳದಲ್ಲೇ ಮೃತಪಟ್ಟಿದ್ದರು. ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇವರೆಲ್ಲರೂ ಬೆಂಗಳೂರಿನ ಸಂಜಯನಗರ ನಿವಾಸಿಗಳಾಗಿದ್ದು, ಎಡೆಯೂರು ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಮರಳಿ ಬೆಂಗಳೂರಿಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಇಬ್ಬರು ಮಕ್ಕಳು ಸೇರಿ ಹನ್ನೊಂದು ಜನ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಗೊಂಡ ಆರು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಲ್ಲಿ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಮೃತೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತಪಟ್ಟವರ ವಿವರ ಪಡೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.