ಬಂಡೀಪುರ ಅರಣ್ಯದಲ್ಲಿ ಬೆಂಕಿ ಅವಘಡ: ಓರ್ವ ಆರೋಪಿ ಬಂಧನ
ಬಂಡೀಪುರ ರಾಷ್ಟ್ರೀಯ ಉದ್ಯಾನವನ ಮತ್ತು ಹುಲಿ ಮೀಸಲು ಅರಣ್ಯ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದಲ್ಲಿ ಉಂಟಾದ ಕಾಳ್ಗಿಚ್ಚು ಪ್ರಕರಣಕ್ಕೆ ಸಂಬಂಧಿಸಿ ಅರಣ್ಯ ...

Published On :
ಚಾಮರಾಜನಗರ: ಬಂಡೀಪುರ ರಾಷ್ಟ್ರೀಯ ಉದ್ಯಾನವನ ಮತ್ತು ಹುಲಿ ಮೀಸಲು ಅರಣ್ಯ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದಲ್ಲಿ ಉಂಟಾದ ಕಾಳ್ಗಿಚ್ಚು ಪ್ರಕರಣಕ್ಕೆ ಸಂಬಂಧಿಸಿ ಅರಣ್ಯ ಇಲಾಖೆ, ಓರ್ವ ಆರೋಪಿಯನ್ನು ಬಂಧಿಸಿದೆ.
ಕಾಡಿನ ಅಂಚಿನ ಕಲ್ಲಿಪುರ ನಿವಾಸಿ ಅರುಣ್ ಕುಮಾರ್ ಬಂಧಿತ ಆರೋಪಿ. ಗೋಪಾಲಸ್ವಾಮಿ ಬೆಟ್ಟ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಈತ ತಲೆಮರೆಸಿಕೊಂಡಿದ್ದ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದರು. ವಲಯ ಅರಣ್ಯಾಧಿಕಾರಿ ಪುಟ್ಟಸ್ವಾಮಿ ಮತ್ತು ಸಿಬ್ಬಂದಿ ನವೀನ್ ಅವರ ತಂಡ ಆರೋಪಿಯನ್ನು ಬಂಧಿಸಿದೆ.
ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಸಾವಿರಾರು ಎಕರೆ ಅರಣ್ಯ ನಾಶಗೊಂಡಿತ್ತು. ವಿಶೇಷವಾಗಿ ಬಂಡೀಪುರ, ಮೂಲೆಹೊಳೆ ಮತ್ತು ಗೋಪಾಲಸ್ವಾಮಿ ಬೆಟ್ಟ ವಲಯಗಳಲ್ಲಿ ಹೆಚ್ಚಿನ ಅರಣ್ಯ ನಾಶವಾಗಿತ್ತು. ಬೆಂಕಿ ನಂದಿಸಲು ಭಾರತೀಯ ವಾಯುಪಡೆಯ ನೆರವು ಪಡೆಯಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


