ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರ ಸ್ಥಾಪನೆಗೆ 4 ಕೋಟಿ ರೂ. ಬಿಡುಗಡೆ
ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು 4 ಕೋಟಿ ರೂಪಾಯಿ ಹಣವನ್ನು ಬೆಸ್ಕಾಂಗೆ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Published On :
ಬೆಂಗಳೂರು: ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು 4 ಕೋಟಿ ರೂಪಾಯಿ ಹಣವನ್ನು ಬೆಸ್ಕಾಂಗೆ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಉದ್ಯಾನಗರಿ ಬೆಂಗಳೂರಿನಲ್ಲಿ ಪರಿಸರ ಸ್ನೇಹಿ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡುತ್ತಿದೆ. ಆದರೆ ಚಾರ್ಜಿಂಗ್ ಕೇಂದ್ರಗಳ ಕೊರತೆಯಿಂದಾಗಿ ಯೋಜನೆ ಇನ್ನೂ ಯಶಸ್ವಿಯಾಗಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಚಾರ್ಜಿಂಗ್ ಕೇಂದ್ರಗಳನ್ನು ಹೆಚ್ಚಿಸಲು ಬೆಸ್ಕಾಂಗೆ ಸೂಚಿಸಿದೆ. ಇದಕ್ಕಾಗಿ ತಕ್ಷಣ 4 ಕೋಟಿ ರೂ. ಅನುದಾನವನ್ನೂ ಬಿಡುಗಡೆ ಮಾಡಿದೆ.
ವಿದ್ಯುತ್ ಸರಬರಾಜು ಕಂಪನಿ ನೀಡಿರುವ ಕ್ರಿಯಾಯೋಜನೆಯಂತೆ ಜಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು 4 ಕೋಟಿ ರೂ.ಗಳನ್ನು ಬೆಸ್ಕಾಂ ಸಂಸ್ಥೆಗೆ 'ಠೇವಣಿ ಕೊಡುಗೆ' ಮಾಡಲು ಕೆಲವು ಷರತ್ತುಗಳೊಂದಿಗೆ ಹಣ ಮಂಜೂರು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಎಲೆಕ್ಟ್ರಿಕ್ ಬ್ಯಾಟರಿ ಚಾಲಿತ ವಾಹನಗಳ ಬ್ಯಾಟರಿಗಳನ್ನು ಬೆಂಗಳೂರು ನಗರ ಮತ್ತು ರಾಜ್ಯಾದ್ಯಂತ ಶೀಘ್ರವಾಗಿ ಚಾರ್ಜಿಂಗ್ ಮಾಡಿಕೊಳ್ಳಲು ಅನುಕೂಲವಾಗುವಂತೆ 100 ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಅನುದಾನ ನೀಡುವಂತೆ ಕೋರಿ ಸಾರಿಗೆ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇದೀಗ ಹಣಕಾಸು ಇಲಾಖೆ ಅನುದಾನ ಬಿಡುಗಡೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruGovernmentಎಲೆಕ್ಟ್ರಿಕ್ ವಾಹನCharging stationsElectric vehicleಚಾರ್ಜಿಂಗ್ ಸ್ಟೇಷನ್ಸ್ರಾಜ್ಯ ಸರ್ಕಾರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


