ಮನೆ ಬಾಗಿಲಿಗೆ ಸರ್ಕಾರಿ ಸೇವೆ; ಮುಖ್ಯಮಂತ್ರಿ ಕುಮಾರಸ್ವಾಮಿ
ರಾಜ್ಯ ಸರ್ಕಾರ ವಿನೂತನ ಯೋಜನೆಯಾದ “ಜನ ಸೇವಕ - ನಾಗರಿಕರ ಮನೆಬಾಗಿಲಿಗೆ ಸರ್ಕಾರದ ...

Published On :
ಬೆಂಗಳೂರು: ರಾಜ್ಯ ಸರ್ಕಾರ ವಿನೂತನ ಯೋಜನೆಯಾದ “ಜನ ಸೇವಕ - ನಾಗರಿಕರ ಮನೆಬಾಗಿಲಿಗೆ ಸರ್ಕಾರದ ಸೇವೆಗಳು” ಯೋಜನೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರಿನ ಬಾಗಲಗುಂಟೆಯಲ್ಲಿ ಮನೆ ಮನೆ ತೆರಳಿ ಚಾಲನೆ ನೀಡಿದರು.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಯೋಜನೆಯನ್ನು ಮುಖ್ಯಮಂತ್ರಿಗಳು ಸ್ಥಳೀಯರೊಬ್ಬರ ಮೋಟಾರ್ ಸೈಕಲ್ ಮೇಲೆ ಕುಳಿತು ಹಲವಾರು ಮನೆಗಳಿಗೆ ತೆರಳಿ ಯೋಜನೆಯ ಲಾಭ ಪಡೆಯುವಂತೆ ಕೋರಿದರು.
ಈ ಸಂದರ್ಭದಲ್ಲಿ ನಾಗರಿಕರೊಂದಿಗೆ ಮಾತನಾಡಿದ ಅವರು, “ಈ ಯೋಜನೆಯಡಿ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬಿ.ಬಿ.ಎಂ.ಪಿ ಖಾತಾ ಸೇವೆಗಳು, ಹಿರಿಯ ನಾಗರಿಕರ ಕಾರ್ಡ್ ಮತ್ತು ಆರೋಗ್ಯ ಕಾರ್ಡ್ ಮುಂತಾದ ಸೇವೆಗಳನ್ನು ಪಡೆಯಬಹುದಾಗಿದ್ದು, ಸಹಾಯವಾಣಿ ಸಂಖ್ಯೆ: 080-44554455 ದೂರವಾಣೆ ಕರೆ ಮಾಡಿದರೆ ಸಾಕು ನಾಗರಿಕರು ಕೋರಿದ ಸೇವೆಗಳನ್ನು ಸಮಯ ಬದ್ಧವಾಗಿ ಹಾಗೂ ಗುಣಾತ್ಮಕವಾಗಿ ವಿಲೇವಾರಿ ಮಾಡಲಾಗುವುದು” ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
HD Kumaraswamycitizensನಾಗರಿಕರುdoorstepಸಿಎಂ ಹೆಚ್ ಡಿ ಕುಮಾರಸ್ವಾಮಿGovernment serviceಸರ್ಕಾರಿ ಸೇವೆಮನೆ ಬಾಗಿಲು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


