ತಮ್ಮ ಮಗಳಿಗೆ ವಿಂಗ್ ಕಮಾಂಡರ್ ಅಭಿನಂದನ್ 'ಅಭಿನಂದನಾ' ಹೆಸರಿಟ್ಟ ಕರ್ನಾಟಕದ ಇಳಕಲ್ ದಂಪತಿ!
ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿ ಶೌರ್ಯ ಪ್ರದರ್ಶಿಸಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ ಗೌರವಾರ್ಥ ತಮಗೆ...

Published On :
ಜೈಪುರ್: ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿ ಶೌರ್ಯ ಪ್ರದರ್ಶಿಸಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ ಗೌರವಾರ್ಥ ತಮಗೆ ಜನಿಸಿದ ಹೆಣ್ಣು ಮಗುವಿಗೆ ಕರ್ನಾಟಕದ ದಂಪತಿ ಅಭಿನಂದನಾ ಎಂದು ನಾಮಕರಣ ಮಾಡಿದ್ದಾರೆ.
ಅಭಿನಂದನ್ ಅವರ ಬಗ್ಗೆ ದೇಶಾದ್ಯಂತ ಮೆಚ್ಚುಗೆಯ ಮಹಪೂರವೇ ಹರಿದು ಬರ್ತಿದೆ . ಅಲ್ಲದೇ ವಿಭಿನ್ನ ರೀತಿಯಲ್ಲಿ ಅಭಿನಂದನ್ ಶೌರ್ಯವನ್ನು ಜನರು ಸ್ಮರಿಸುತ್ತಿದ್ದಾರೆ. ಇತ್ತ ಕರ್ನಾಟಕದ ಬಾಗಲಕೋಟೆಯ ಇಳಕಲ್ ಪಟ್ಟಣದಲ್ಲಿರುವ ಅರವಿಂದ ಜಮಖಂಡಿ ಮತ್ತು ಪೂರ್ಣಿಮಾ ದಂಪತಿ ತಮ್ಮ ಹೆಣ್ಣು ಮಗುವಿಗೆ ಅಭಿನಂದನಾ ಎಂದು ಹೆಸರಿಡುವ ಮೂಲಕ ವಿಂಗ್ ಕಮಾಂಡರ್ ಗೆ ಗೌರವ ಸಲ್ಲಿಸಿದ್ದಾರೆ.
ಅರವಿಂದ್ ಹಾಗೂ ಪೂರ್ಣಿಮಾ ದಂಪತಿಗೆ ಫೆಬ್ರವರಿ 11ರಂದೇ ಹೆಣ್ಣು ಮಗು ಜನಿಸಿತ್ತು. ಆದರೆ ಮಗುವಿಗೆ ನಾಮಕರಣ ಮಾಡಿರಲಿಲ್ಲ. ಆದರೆ ಇದೀಗ ಇಡೀ ದೇಶವೇ ಹೆಮ್ಮೆ ಪಡುವಂತಹ ಯೋಧನಾಗಿ ಅಭಿನಂದನ್ ಹೊರಹೊಮ್ಮಿದ್ದು ಈ ಹಿನ್ನೆಲೆಯಲ್ಲಿ ತಮ್ಮ ಮಗುವಿಗೆ ಅವರ ಹೆಸರನ್ನಿಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


