ಮಾ.20ರಿಂದ ಆರ್ ಟಿಇಯಡಿ ಅರ್ಜಿ ಸಲ್ಲಿಕೆ ಆರಂಭ
ಶಿಕ್ಷಣ ಹಕ್ಕು ಕಾಯ್ದೆಯಡಿ ಸಾರ್ವಜನಿಕ ಶಿಕ್ಷಣ ಇಲಾಖೆ 2019-20ನೇ ಸಾಲಿಗೆ ಅರ್ಜಿ ಸಲ್ಲಿಸಲು ವೇಳಾಪಟ್ಟಿ...

Published On :
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ ಸಾರ್ವಜನಿಕ ಶಿಕ್ಷಣ ಇಲಾಖೆ 2019-20ನೇ ಸಾಲಿಗೆ ಅರ್ಜಿ ಸಲ್ಲಿಸಲು ವೇಳಾಪಟ್ಟಿ ಬಿಡುಗಡೆ ಮಾಡಿದೆ. ಸರ್ಕಾರಿ ಶಾಲೆಗಳು ಇರದ ಕಡೆ ಬಡ ಮಕ್ಕಳು ಅನುದಾನ ಮತ್ತು ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟುಸೀಟು ಪಡೆಯುವ ಸೌಲಭ್ಯ ಇದಾಗಿದೆ. ಮಾ.20ರಿಂದ ಏ.15 ರ ವರೆಗೆ ಪೋಷಕರು ಅರ್ಜಿ ಸಲ್ಲಿಸಬಹುದು.
ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ. ಮೇ 1ರಂದು ಆನ್‌ಲೈನ್ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆ ಮಾಡಲಿದ್ದು, ಎರಡನೇ ಸುತ್ತಿನ ಸೀಟು ಹಂಚಿಕೆ ಮೇ 25ರಂದು ನಡೆಯಲಿದೆ ಎಂದು ಶಿಕ್ಷಣ ಇಲಾಖೆ ಆಯುಕ್ತ ಪಿ.ಸಿ. ಜಾಫರ್ ತಿಳಿಸಿದ್ದಾರೆ.
2015ರ ಏ.1ರ ನಂತರ ಬರಗಾಲದ ಕಾರಣ ಆತ್ಯಹತ್ಯೆ ಮಾಡಿಕೊಂಡ ರೈತರ ಮಕ್ಕಳು, ವಿಶೇಷ ಪ್ರವರ್ಗಕ್ಕೆ ಸೇರಿo ಅನಾಥ ಮಗು, ಎಚ್‌ಐವಿ ಬಾಧಿತ/ಸೋಂಕಿತ ಮಗು, ಮಂಗಳಮುಖಿ ಮಗು, ವಿಶೇಷ ಅಗತ್ಯತೆಯುಳ್ಳ ಮಗು, ವಲಸೆ ಮತ್ತು ಬೀದಿ ಮಕ್ಕಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಪೋಷಕರ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಬಳಿಕ ದಾಖಲೆಗಳಲ್ಲಿ ದೋಷಗಳನ್ನು ಸರಿಪಡಿಸುವಂತೆ ಪೋಷಕರ ಮೊಬೈಲ್ ಸಂಖ್ಯೆಗೆ ಮೆಸೇಜ್ ಕಳುಹಿಸಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


