ಬೆಂಗಳೂರು ವಿವಿನಲ್ಲಿ ಈಶಾನ್ಯ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್: ನಾಳೆ ಪ್ರಧಾನಿ ಮೋದಿ ಉದ್ಘಾಟನೆ
ಬೆಂಗಳೂರು ವಿಶ್ವವಿದ್ಯಾನಿಲಯವು ಜ್ಞಾನಭಾರತಿ ಆವರಣದಲ್ಲಿ ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳಿಗಾಗಿ ನಿರ್ಮಿಸಿರುವ ವಿದ್ಯಾರ್ಥಿ ನಿಯಲವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

Published On :
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯವು ಜ್ಞಾನಭಾರತಿ ಆವರಣದಲ್ಲಿ ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳಿಗಾಗಿ ನಿರ್ಮಿಸಿರುವ ವಿದ್ಯಾರ್ಥಿ ನಿಯಲವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಮಾರ್ಚ್ 6ರಂದು ಕಲಬುರ್ಗಿಗೆ ಆಗಮಿಸಲಿರುವ ಮೋದಿ ಡಿಜಿಟಲ್ ಮಾಧ್ಯಮದ ಮೂಲಕ ವಿದ್ಯಾರ್ಥಿ ನಿಲಯವನ್ನು ಉದ್ಘಾಟಿಸಲಿದ್ದಾರೆ.
ಈಶಾನ್ಯ ರಾಜ್ಯಗಳಿಂದ ಶಿಕ್ಷಣಕ್ಕಾಗಿ ಆಗಮಿಸುವ ವಿದ್ಯಾರ್ಥಿನಿಯರಿಗಾಗಿ ಈ ವಿದ್ಯಾರ್ಥಿ ನಿಲಯ ನಿರ್ಮಿಸಲಾಗಿದೆ. ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ನಾತಕಪೂರ್ವ ಮತ್ತು ಸ್ನಾತಕೋತ್ತರ ಶಿಕ್ಷಣವನ್ನು ಪಡೆಯುವ ಆ ಭಾಗದ ವಿದ್ಯಾರ್ಥಿನಿಯರು ಇಲ್ಲಿ ತಂಗಬಹುದಾಗಿದೆ.ವಿದ್ಯಾರ್ಥಿ ನಿಲಯವು 5.5 ಎಕರೆ ಭೂಮಿ ಹೊಂದಿದ್ದು 2,000 ವಿದ್ಯಾರ್ಥಿನಿಯರಿಗೆ ಉಳಿದುಕೊಳ್ಳುವ ವ್ಯವಸ್ಥೆ ಇದೆ.
ನಾರ್ತ್ ಈಸ್ಟ್ ಕೌನ್ಸಿಲ್ ಸಹಯೋಗದೊಡನೆ ಇದನ್ನು ನಿರ್ಮಿಸಲಾಗಿದೆ. ಆದರೆ ಈ ವಿದ್ಯಾರ್ಥಿ ನಿಲಯದಲ್ಲೇ ಶೇ. 25 ಕ್ಕಿಂತಲೂ ಹೆಚ್ಚಿನ ಸ್ಥಾನಗಳನ್ನು ಸ್ಥಳೀಯ ವಿದ್ಯಾರ್ಥಿನಿಯರಿಗೆ ಮೀಸಲಿರಿಸಲಾಗಿದೆ.2014 ರಲ್ಲಿ ಹೊಸದಿಲ್ಲಿಯಲ್ಲಿ ಅರುಣಾಚಲ ಪ್ರದೇಶದ ವಿದ್ಯಾರ್ಥಿಗಳು ದಾಳಿಗೊಳಗಾದ ಬಳಿಕ ಈ ಉಪಕ್ರಮವನ್ನು ತೆಗೆದುಕೊಳ್ಳಲಾಗಿದೆ
ವಿದ್ಯಾರ್ಥಿನಿಲಯದ ನಿರ್ಮಾಣದ ಅಂದಾಜು ವೆಚ್ಚ 13 ಕೋಟಿ ರು. ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
PM ModiBangalore Universityಬೆಂಗಳೂರು ವಿವಿHostelBU hostel for North Eastern studentsಈಶಾನ್ಯ ವಿದ್ಯಾರ್ಥಿಗಳಿಗೆವಿದ್ಯಾರ್ಥಿ ನಿಲಯಬೆಂಗಳೂರು ವಿವಿ ವಿದ್ಯಾರ್ಥಿ ನಿಲಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


