ರಕ್ಷಣಾ ಇಲಾಖೆ ಭೂಮಿಯನ್ನು ಸಿಎಂ ಗೆ ಹಸ್ತಾಂತರಿಸಿದ ನಿರ್ಮಲಾ ಸೀತಾರಾಮನ್
ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಸುಮಾರು 12 ಅಭಿವೃದ್ಧಿ ಕಾರ್ಯಗಳಿಗೆ ಶಂಕು ಸ್ಥಾಪನೆ ...

Published On :
ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಸುಮಾರು 12 ಅಭಿವೃದ್ಧಿ ಕಾರ್ಯಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು,
ಹಲವು ಅಭಿವೃದ್ಧಿ ಕಾರ್ಯಗಳಿಗಾಗಿ ರಕ್ಷಣಾ ಇಲಾಖೆ ಭೂಮಿಯನ್ನು ನೀಡಬೇಕೆಂದು ಮನವಿ ಮಾಡಲಾಗಿತ್ತು, ಹಲವು ವರ್ಷಗಳಿಂದ ರಕ್ಷಣಾ ಭೂಮಿಯನ್ನು ನೀಡಲು ಇದ್ದ ತೊಡಕುಗಳೆಲ್ಲಾ ನಿವಾರಣೆಯಾಗಿದ್ದು, ಎಲ್ಲಾ ಸಮಸ್ಯೆಗಳು ಬಗೆಹರಿದಿವೆ, ಸರ್ಕಾರ ಈ ಸಂಬಂಧ ಸಮಸ್ಯೆ ಬಗೆಹರಿಸಲು ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ, ಹೀಗಾಗಿ ಹಲವು ಅಭಿವೃದ್ಧಿ ಕಾರ್ಯಗಳೂ ಅಪೂರ್ಣವಾಗಿಯೇ ಉಳಿದಿದ್ದವು, ಆದರೆ ಈ ಬಾರಿ ಅದು ಪೂರ್ಣಗೊಂಡಿದೆ ಎಂದು ನಿರ್ಮಲಾ ಸೀತರಾಮನ್ ಹೇಳಿದ್ದಾರೆ.
ಬೆಂಗಳೂರಿನ ಸ್ವರೂಪವನ್ನು ಬದಲಾಯಿಸಲು ಸಮ್ಮಿಶ್ರ ಸರ್ಕಾರ ಬದ್ಧವಾಗಿದೆ, ಸಬ್ ಅರ್ಬನ್ ರೈಲ್ವೆ ಯೋಜನೆಯನ್ನು ಶೀಘ್ರವೇ ಆರಂಭಿಸಲಾಗುವುದು, ಸರ್ಕಾರ ಫೆರಿಪಿರಿಲ್ ರಸ್ತೆ ಹಾಗೂ 102 ಕಿಮೀ ಎಲಿವೇಟೆಡ್ ಕಾರಿಡಾರ್ ಅನ್ನು ಪೂರ್ಣಗೊಳಿಸಲಾಗುವುದು, ರಕ್ಷಣಾ ಇಲಾಖೆ 55 ಸಾವಿರ ಚದರ ಅಡಿ ಮೀಟರ್ ಭೂಮಿಯನ್ನು ಈ ಯೋಜನೆಗಳ ಆರಂಭಕ್ಕಾಗಿ ರಾಜ್ಯ ಸರ್ಕಾರ ನೀಡಿದೆ.
ಮೆಟ್ರೋ 2ನೇ ಹಂತದಲ್ಲಿ 12 ಅಂಡರ್ ಗ್ರೌಂಡ್ ಸ್ಟೇಷನ್ಸ್ ಬರಲಿದ್ದು, ಅದರಲ್ಲಿ ಮೂರು ಸ್ಟೇಷನ್ಸ್ ರಕ್ಷಣಾ ಇಲಾಖೆ ಜಾಗದಲ್ಲಿ, ಬರಲಿವೆ, ಮಂದಿನ ಮೂರು ತಿಂಗಳಲ್ಲಿ ಈ ಕೆಲಸ ಆರಂಭವಾಗಲಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
H D Kumaraswamyನಮ್ಮ ಮೆಟ್ರೋNirmala Sitharamanನಿರ್ಮಲಾ ಸೀತಾರಾಮನ್ಶಂಕು ಸ್ಥಾಪನೆstone laying ceremonynamma metro. ಕುಮಾರಸ್ವಾಮಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


