ಜನತಾ ದರ್ಶನದಲ್ಲಿ ನಕಲಿ ದಾಖಲೆ ಸಲ್ಲಿಸಿ, ಪರಿಹಾರಕ್ಕೆ ಅರ್ಜಿ; ಇಬ್ಬರ ವಿರುದ್ಧ ಪ್ರಕರಣ ದಾಖಲು
ಮುಖ್ಯಮಂತ್ರಿಗಳ ಜನತಾ ದರ್ಶನದಲ್ಲಿ ನಕಲಿ ವೈದ್ಯಕೀಯ ದಾಖಲೆಗಳೊಂದಿಗೆ ನೆರವಿಗಾಗಿ ಅರ್ಜಿ ಸಲ್ಲಿಸಿದ್ದ ಇಬ್ಬರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Published On :
ಬೆಂಗಳೂರು: ಮುಖ್ಯಮಂತ್ರಿಗಳ ಜನತಾ ದರ್ಶನದಲ್ಲಿ ನಕಲಿ ವೈದ್ಯಕೀಯ ದಾಖಲೆಗಳೊಂದಿಗೆ ನೆರವಿಗಾಗಿ ಅರ್ಜಿ ಸಲ್ಲಿಸಿದ್ದ ಇಬ್ಬರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಫೆಬ್ರುವರಿ 20 ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನತಾದರ್ಶನದಲ್ಲಿ ಚನ್ನಪ್ಪ ಹಾಗೂ ಸುನಂದಮ್ಮ ಎಂಬವವರು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು ಒದಗಿಸುವಂತೆ ಮನವಿ ಸಲ್ಲಿಸಿದ್ದರು.
ಈ ಅರ್ಜಿಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆಯ ಕಚೇರಿ ಸಿಬ್ಬಂದಿ ಪರಿಶೀಲಿಸಿದಾಗ ಅವರು ಲಗತ್ತಿಸಿರುವ ಮಣಿಪಾಲ್ ಆಸ್ಪತ್ರೆಯ ವೈದ್ಯಕೀಯ ದಾಖಲೆಗಳು ಮೇಲ್ನೋಟಕ್ಕೇ ನಕಲಿ ಎಂದು ಕಂಡು ಬಂದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪ್ರಕರಣcomplaintHD KumaraswamyಪೊಲೀಸರುFake documentsಜನತಾ ದರ್ಶನJanatha darshanPolice ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿನಕಲಿ ದಾಖಲೆಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


