ಪ್ರಕಾಶ್ ರೈ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರತಾಪ್ ಸಿಂಹಗೆ ಷರತ್ತು ಬದ್ಧ ಜಾಮೀನು ಮಂಜೂರು
ಚಲನಚಿತ್ರ ನಟ ಪ್ರಕಾಶ್ ರೈ ವಿರುದ್ಧ ಟ್ಟಿಟರ್‌ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಕೊನೆಗೂ ಜನಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರು: ಚಲನಚಿತ್ರ ನಟ ಪ್ರಕಾಶ್ ರೈ ವಿರುದ್ಧ ಟ್ಟಿಟರ್‌ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಕೊನೆಗೂ ಜನಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆಯೇ ಸೂಚನೆ ನೀಡಿದ್ದರೂ ಗೈರು ಹಾಜರಾಗಿದ್ದ ಪ್ರತಾಪ್ ಸಿಂಹ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು.ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಇಂದು ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರಾಗಿ ವಾರಂಟ್ ರದ್ದುಗೊಳಿಸುವಂತೆ ಮನವಿ ಮಾಡಿದ್ದರು. ಇದನ್ನೊಪ್ಪದ ನ್ಯಾಯಾಲಯ, ಅವರನ್ನು ಕೆಲ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಿತ್ತು. ನಂತರ, ಸಂಜೆ 10 ಸಾವಿರ ರೂ. ಖಾತರಿ ಹಣ ಪಡೆದು ಜಾಮೀನು ಮಂಜೂರು ಮಾಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


