ರಾಜ್ಯ

ಸಕಲೇಶಪುರ ಬಳಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲಿಯೇ ನಾಲ್ವರು ಸಾವು

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ...

ಸಕಲೇಶಪುರ ಬಳಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲಿಯೇ ನಾಲ್ವರು ಸಾವು
ಸಾಂದರ್ಭಿಕ ಚಿತ್ರ
Published On :
ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾನುವಾರ ನಸುಕಿನ ಜಾವ ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಉಂಟಾದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಗಂಭೀರ ಗಾಯಗೊಂಡ ಮತ್ತಿಬ್ಬರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಕೆಎಸ್ ಆರ್ ಟಿಸಿ ಬಸ್ಸು ಮಂಗಳೂರಿನಿಂದ ಬರುತ್ತಿದ್ದು, ಹಾಸನದಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪುರುಷರು, ಓರ್ವ ಮಹಿಳೆ ಮತ್ತು ಒಂದು ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಮೃತದೇಹಗಳು ರಸ್ತೆಗೆ ಬಿದ್ದವು.
ಕಾರಿನಲ್ಲಿದ್ದ ಮತ್ತಿಬ್ಬರು ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದು, ಸಕಲೇಶಪುರ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹಾಸನ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ವರ್ಗಾಯಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.