ವೇದಿಕೆಯಲ್ಲಿಯೇ ಕುಸಿದುಬಿದ್ದು ಯಕ್ಷಗಾನ ಕಲಾವಿದ ಹುಡಗೋಡು ಚಂದ್ರಹಾಸ ಸಾವು
ಯಕ್ಷಗಾನ ರಂಗಸ್ಥಳದಲ್ಲಿಯೇ ವೇಷತೊಟ್ಟು ಅರ್ಥ ಹೇಳಿ ಕುಣಿಯುತ್ತಿರುವಾಗ ಕುಸಿದು ಯಕ್ಷಗಾನ ಕಲಾವಿದ...

Published On :
ಉಡುಪಿ : ಯಕ್ಷಗಾನ ರಂಗಸ್ಥಳದಲ್ಲಿಯೇ ವೇಷತೊಟ್ಟು ಅರ್ಥ ಹೇಳಿ ಕುಣಿಯುತ್ತಿರುವಾಗ ಕುಸಿದು ಯಕ್ಷಗಾನ ಕಲಾವಿದ ಹುಡಗೋಡು ಚಂದ್ರಹಾಸ(52 ವ) ಮೃತಪಟ್ಟಿರುವ ಘಟನೆ ಕಳೆದ ರಾತ್ರಿ ಬೈಂದೂರಿನ ಜೋಗಿಬೆಟ್ಟು ಗ್ರಾಮದಲ್ಲಿ ನಡೆದಿದೆ. ಎಳಜಿತ್ ಯಕ್ಷಗಾನ ಕಾರ್ಯಕ್ರಮದಲ್ಲಿ ಈ ದುರ್ಘಟನೆ ನಡೆದಿದೆ.
ಭೀಷ್ಮ ವಿಜಯ ಪ್ರಸಂಗದಲ್ಲಿ ಸಾಲ್ವನ ಪಾತ್ರ ನಿರ್ವಹಿಸಿದ ಹುಡುಗೋಡು ಚಂದ್ರಹಾಸ ಅವರು ಭೀಷ್ಮ ಎನ್ನುವ ಉದ್ಘಾರ ತೆಗೆಯುತ್ತಲೆ ವೇದಿಕೆಯಲ್ಲೇ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಸಂಭಾಷಣೆ ಮುಗಿಸಿ ಕುಣಿತ ಆರಂಭಿಸುತ್ತಿದ್ದಂತೆ ಹೃದಯಾಘಾತ ಸಂಭವಿಸಿದ್ದು, ಇವರು ಉತ್ತರ ಕನ್ನಡದ ಬಡಗುತಿಟ್ಟು ಯಕ್ಷಗಾನದ ಪ್ರಸಿದ್ಧ ಕಲಾವಿದರಾಗಿದ್ದರು.
ರಾಜಕೀಯ ರಂಗಕ್ಕೆ ಕಾಲಿರಿಸಿದ್ದ ಚಂದ್ರಹಾಸ ಅವರು ಉತ್ತರಕನ್ನಡದ ಹಡಿನಬಾಳ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾಗಿದ್ದರು. ರಾಜಕೀಯಕ್ಕೆ ಸೇರಿದ ಬಳಿಕ ಸಕ್ರಿಯ ಯಕ್ಷಗಾನ ವೃತ್ತಿಯಿಂದ ದೂರವಾಗಿ ಹವ್ಯಾಸಿಯಾಗಿ ಕಲಾ ಸೇವೆ ಮುಂದುವರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


