ನೀತಿ ಸಂಹಿತೆ ಉಲ್ಲಂಘನೆ; ವಿಜಯಾನಂದ ಕಾಶಪ್ಪನವರ ವಿರುದ್ಧ ಜಾಮೀನು ರಹಿತ ವಾರಂಟ್
ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ನಗರದ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.

Published On :
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಹಾಜರಾಗದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ನಗರದ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.
ಬುಧವಾರ ಮುಂಜಾನೆ ಪ್ರಕರಣ ವಿಚಾರಣೆಗೆ ಬಂದಾಗ, ಕಾಶಪ್ಪನವರ ಪರ ವಕೀಲರು , ಅವರು ಶೌಚಾಲಯಕ್ಕೆ ಹೋಗಿದ್ದಾರೆ. ವಿಚಾರಣೆಯನ್ನು ಸ್ವಲ್ಪ ಕಾಲ ಮುಂದೂಡಿ ಎಂದು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ರಾಮಚಂದ್ರ ಡಿ ಹುದ್ದಾರ ವಿಚಾರಣೆಯನ್ನು ಮಧ್ಯಾಹ್ನ 1.45ಕ್ಕೆ ಮುಂದೂಡಿದರು. ಪ್ರಕರಣ ಮರು ವಿಚಾರಣೆಗೆ ಬಂದಾಗ ಪ್ರಕರಣದ ಪರ, ವಿರೋಧಿ ವಕೀಲರು ಕೂಡ ಹಾಜರಿರದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮತ್ತೆ ಮಧ್ಯಾಹ್ನ 3ಕ್ಕೆ ಮುಂದೂಡಿದರು.
ಮಧ್ಯಾಹ್ನ ಪ್ರಕರಣ ವಿಚಾರಣೆಗೆ ಬಂದಾಗ, ಕಾಶಪ್ಪನವರ ಸಂಬಂಧಿಕರು ಹಠಾತ್ ನಿಧನ ಹೊಂದಿದ್ದರಿಂದ ಅನಿವಾರ್ಯವಾಗಿ ಅವರು ಹೊರಡಬೇಕಾಯಿತು. ಆದ್ದರಿಂದ ಇಂದಿನ ವಿಚಾರಣೆಗೆ ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡಬೇಕು ಎಂದು ವಕೀಲರು ಮನವಿ ಮಾಡಿದರು.
ಇದರಿಂದ ಆಕ್ರೋಶಗೊಂಡ ನ್ಯಾಯಾಧೀಶರು, ಪದೇ ಪದೇ ಇಂತಹ ನೆಪಗಳನ್ನು ಹೇಳಿ ನ್ಯಾಯಾಲಯದ ಜೊತೆಗೆ ಆಟವಾಡುತ್ತಿದ್ದೀರಾ? ಎಂದು ವಕೀಲರನ್ನು ತರಾಟೆಗೆ ತೆಗೆದುಕೊಂಡು ಕಾಶಪ್ಪನವರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


