ಮಾತೆ ಮಹಾದೇವಿ ಆರೋಗ್ಯ ಸ್ಥಿತಿ ಗಂಭೀರ: ಮಣಿಪಾಲ್ ಆಸ್ಪತ್ರೆ ಪ್ರಕಟಣೆ
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿರುವ.ಜಗದ್ಗುರು ಮಾತೆ ಮಹಾದೇವಿ ಅವರ ಪರಿಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಮೂಲಕ ಉಸಿರಾಡುತ್ತಿದ್ದಾರೆ ಎಂದು ಮಣಿಪಾಲ ಆಸ್ಪತ್ರೆಯ ಪ್ರಕಟಣೆ...

Published On :
ಬೆಂಗಳೂರು: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿರುವ.ಜಗದ್ಗುರು ಮಾತೆ ಮಹಾದೇವಿ ಅವರ ಪರಿಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಮೂಲಕ ಉಸಿರಾಡುತ್ತಿದ್ದಾರೆ ಎಂದು ಮಣಿಪಾಲ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
74 ವರ್ಷದ ಮಾತೆ ಮಹಾದೇವಿ ಅವರು ದೀರ್ಘಕಾಲದಿಂದ ಮಧುಮೇಹ, ಗಂಭೀರ ಶ್ವಾಸಕೋಶ ಹಾಗೂ ಮೂತ್ರಪಿಂಡದ ಸಮಸ್ಯೆ ಎದುರಿಸುತ್ತಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಮಾ.8ರಂದು ಅವರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿದ್ದಾರೆ. ಅಂದಿನಿಂದ ಕೇವಲ ಜೀವರಕ್ಷಕ ಉಪಕರಣಗಳ ನೆರವಿನಿಂದ ಉಸಿರಾಡುತ್ತಿದ್ದಾರೆ.
ಮಾತೆಯವರಿಗೆ ನಿರಂತರವಾಗಿ ಆ್ಯಂಟಿ ಬಯೋಟಿಕ್ಸ್ ಔಷಧ ಪೂರೈಸಲಾಗುತ್ತಿದೆ. ತುರ್ತು ನಿಗಾ ಘಟಕ, ಮೂತ್ರಪಿಂಡ ಹಾಗೂ ಶ್ವಾಸಕೋಶ ತಜ್ಞರ ತಂಡ ದಿನದ 24 ಗಂಟೆಗಳ ಕಾಲ ಚಿಕಿತ್ಸೆಯಲ್ಲಿ ನಿರತವಾಗಿದೆ. ಸದ್ಯ ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಅಧ್ಯಕ್ಷ ಡಾ.ಎಚ್.ಸುದರ್ಶನ್ ಬಲ್ಲಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


