ರಾಜ್ಯ

ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆಗಳ ಹಂಚಿಕೆಯಲ್ಲಿ ಸಿಂಹಪಾಲು ಬೆಂಗಳೂರಿಗೆ, ಸದ್ಯದಲ್ಲೇ ಸರ್ಕಾರ ಪ್ರಕಟ

ಮುಂದಿನ ಶೈಕ್ಷಣಿಕ ವರ್ಷದಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿ ಹೆಚ್ಚು ಸರ್ಕಾರಿ ಆಂಗ್ಲ ಮಾಧ್ಯಮ ...

ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆಗಳ ಹಂಚಿಕೆಯಲ್ಲಿ ಸಿಂಹಪಾಲು ಬೆಂಗಳೂರಿಗೆ, ಸದ್ಯದಲ್ಲೇ ಸರ್ಕಾರ ಪ್ರಕಟ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿ ಹೆಚ್ಚು ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳು ತಲೆಯೆತ್ತಲಿವೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಾಲೆಯನ್ನು ಆರಂಭಿಸಲು ಸುಮಾರು ಸಾವಿರ ಶಾಲೆಗಳ ಪಟ್ಟಿಯನ್ನು ತಯಾರಿಸಿದೆ. ಅವುಗಳಲ್ಲಿ 122 ಶಾಲೆಗಳು ಬೆಂಗಳೂರಿಗೆ ಹಂಚಿಕೆಯಾಗಿದೆ.
ಇಲಾಖೆಯಿಂದ ಸಿಕ್ಕಿರುವ ಅಂಕಿಅಂಶ ಪ್ರಕಾರ, ಬೆಂಗಳೂರು ನಂತರ ಬೆಳಗಾವಿ ಜಿಲ್ಲೆಯಲ್ಲಿ ಅತಿಹೆಚ್ಚು  ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳು (73) ಮತ್ತು ಕೊಡಗು ಜಿಲ್ಲೆಗೆ ಕೇವಲ 8 ಶಾಲೆಗಳು ಹಂಚಿಕೆಯಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು 2 ಸಾವಿರ ಶಾಲೆಗಳ ಪಟ್ಟಿಯನ್ನು ಸರ್ಕಾರಕ್ಕೆ ಕಳುಹಿಸಿದ್ದು ಅವುಗಳಲ್ಲಿ ಸಾವಿರ ಶಾಲೆಗಳು ಆಯ್ಕೆಯಾಗಿವೆ.
ಸರ್ಕಾರಿ ಆಂಗ್ಲಮಾಧ್ಯಮ ಶಾಲೆ ಆರಂಭಿಸುವುದಾಗಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು. ಅದನ್ನು ಕನ್ನಡಪರ ಕಾರ್ಯಕರ್ತರು ವಿರೋಧಿಸಿದ್ದರು.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಧಾರವಾಡದಲ್ಲಿ ಕೂಡ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಲಾಗಿತ್ತು. ಆದರೂ ಕೂಡ ಸಿಎಂ ತಮ್ಮ ನಿರ್ಧಾರಕ್ಕೆ ಬದ್ಧವಾಗಿ ಶಾಲೆಗಳ ಆರಂಭಕ್ಕೆ ಮುಂದಿನ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚಿಸಿದ್ದರು. ಈ ನಿಟ್ಟಿನಲ್ಲಿ ಶಿಕ್ಷಕರಿಗೆ ತರಬೇತಿ ನೀಡುವ ಕೆಲಸ ಕೂಡ ನಡೆಯುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.