ನಟ ದರ್ಶನ್, ಯಶ್ ವಿರುದ್ಧ ಚುನಾವಣಾ ಆಯೋಗಕ್ಕೆ 'ನಮ್ಮ ಕರ್ನಾಟಕ ರಕ್ಷಣಾ ವೇದಿಕೆ' ದೂರು!
ನಟರಾದ ದರ್ಶನ್ ಮತ್ತು ಯಶ್ ವಿರುದ್ಧ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಚುನಾವಣಾ ಆಯೋಗಕ್ಕೆ ...

Published On :
ಬೆಂಗಳೂರು: ನಟರಾದ ದರ್ಶನ್ ಮತ್ತು ಯಶ್ ವಿರುದ್ಧ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅವರಿಗೆ ಬಹಿರಂಗವಾಗಿ ಬೆಂಬಲ ಮತ್ತು ಪ್ರಚಾರ ನೀಡುವುದಾಗಿ ಈ ಇಬ್ಬರು ನಟರು ಘೋಷಿಸಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆ ಅಡಿಯಲ್ಲಿ ಪ್ರಕರಣ ಬರುವುದರಿಂದ ಜನರ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿರುವುದರಿಂದ ಚುನಾವಣಾ ಅಧಿಕಾರಿಗಳಿಗೆ ರಕ್ಷಣಾ ವೇದಿಕೆಯ ಮುಖಂಡರು ದೂರು ಸಲ್ಲಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯುವವರೆಗೆ ನಟರಾದ ದರ್ಶನ್ ಮತ್ತು ಯಶ್ ಅವರ ಚಲನಚಿತ್ರಗಳು, ಟಿ ವಿ ಕಾರ್ಯಕ್ರಮಗಳು, ಜಾಹೀರಾತುಗಳು ಮತ್ತು ಸಿನಿಮಾಗಳನ್ನು ಪ್ರಸಾರ ಮಾಡಬಾರದು.
ಚುನಾವಣೆ ಮುಗಿಯುವವರೆಗೆ ಈ ಇಬ್ಬರು ನಟರ ಎಲ್ಲಾ ಮನರಂಜನಾ ಕಾರ್ಯಕ್ರಮಗಳಿಗೆ ತಡೆ ನೀಡಬೇಕೆಂದು ಕೋರಿ ಆಯೋಗಕ್ಕೆ ದೂರು ಸಲ್ಲಿಸಿದ್ದೇವೆ ಎಂದು ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಜಯರಾಜು ನಾಯ್ಡು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
yashPoliticsದೂರುcomplaintDarshanಚುನಾವಣಾ ಆಯೋಗಮಂಡ್ಯದರ್ಶನ್Mandyaಯಶ್election comissionSumalathaಸುಮಲತಾNamma Karnataka Rakshana Vedikeನಮ್ಮ ಕರ್ನಾಟಕ ರಕ್ಷಣಾ ವೇದಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


