ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: 2 ಸಾವು, 50ಕ್ಕೂ ಹೆಚ್ಚು ಜನ ಸಿಲುಕಿರುವ ಶಂಕೆ!
ಕಾಂಗ್ರೆಸ್ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಂಬಂಧಿಕರಿಗೆ ಸೇರಿದ ನಿರ್ಮಾಣದ ಹಂತದ ಐದು ಅಂತಸ್ತಿನ ಕಟ್ಟದ ಕುಸಿದಿದ್ದು ಪರಿಣಾಮ 2 ಸಾವನ್ನಪ್ಪಿದ್ದು 50ಕ್ಕೂ ಹೆಚ್ಚು ಜನರು ಅವಶೇಷದಡಿ...

Published On :
ಧಾರವಾಡ: ಕಾಂಗ್ರೆಸ್ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಂಬಂಧಿಕರಿಗೆ ಸೇರಿದ ನಿರ್ಮಾಣದ ಹಂತದ ಐದು ಅಂತಸ್ತಿನ ಕಟ್ಟದ ಕುಸಿದಿದ್ದು ಪರಿಣಾಮ 2 ಸಾವನ್ನಪ್ಪಿದ್ದು 50ಕ್ಕೂ ಹೆಚ್ಚು ಜನರು ಅವಶೇಷದಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಧಾರವಾಡದ ಕುಮಾರೇಶ್ವರ ನಗರದಲ್ಲಿ ಈ ಅವಘಡ ಸಂಭವಿಸಿದೆ. ಇನ್ನು ಅವಶೇಷಗಳಡಿ ಸಿಲುಕಿರುವವರಿಗಾಗಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಹಾಗೂ ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ಈ ಕಟ್ಟದ ಕುಸಿದಿದೆ ಎಂದು ಹೇಳಲಾಗುತ್ತಿದೆ.
ಈ ಕಟ್ಟಡದ ಪಕ್ಕದಲ್ಲಿ ವಾಸಿಸುತ್ತಿದ್ದವರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ. ಸ್ಥಳಕ್ಕೆ ರಕ್ಷಣಾ ಪಡೆ ಪೊಲೀಸರು, 20ಕ್ಕೂ ಹೆಚ್ಚು ಆಂಬ್ಯುಲೆನ್ಸ್, ನೂರಾರು ವೈದ್ಯಕೀಯ ಮತ್ತು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ.
ಇದುವರೆಗೆ 10ಕ್ಕೂ ಮಂದಿಯನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯ ಬಿರುಸಿನಿಂದ ನಡೆಯುತ್ತಿದ್ದು, ಗಾಯಗೊಂಡವರನ್ನು ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ದುರಂತದಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘಟನೆಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರೊಂದಿಗೆ ಮಾತನಾಡಿ, ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸುವಂತೆ ಸೂಚಿಸಿದ್ದಾರೆ. ಬೆಂಗಳೂರಿನಿಂದ ವಿಶೇಷ ರಕ್ಷಣಾ ತಂಡವೊಂದನ್ನು ವಿಶೇಷ ವಿಮಾನದಲ್ಲಿ ಕಳುಹಿಸುವಂತೆ ಸೂಚನೆ ನೀಡಿದ್ದಾರೆ.
ಅಲ್ಲದೆ ಸುತ್ತಮುತ್ತಲಿನ ಆರೋಗ್ಯ ಕೇಂದ್ರ ಆಸ್ಪತ್ರೆಗಳ ವೈದ್ಯಕೀಯ ತಂಡಗಳನ್ನು ನಿಯೋಜಿಸಿ, ಗಾಯಾಳುಗಳಿಗೆ ಕೂಡಲೇ ಚಿಕಿತ್ಸೆ ಒದಗಿಸಲು ಕ್ರಮವಹಿಸುವಂತೆ ಸೂಚನೆ ನೀಡಿದ್ದಾರೆ.
ಬೆಳಗಾವಿ, ಹಾವೇರಿ, ಗದಗ ಮತ್ತು ಇತರ ಜಿಲ್ಲೆಗಳ ಅಗ್ನಿಶಾಮಕ ದಳ ಮತ್ತು ತಜ್ಞರ ತಂಡ ಸ್ಥಳಕ್ಕೆ ಧಾವಿಸಿದೆ. ಸಾವು-ನೋವಿನ ಬಗ್ಗೆ ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಕಟ್ಟಡ ಕುಸಿಯುವಾಗ ಕಾರ್ಮಿಕರು ಸೇರಿದಂತೆ 50ಕ್ಕೂ ಅಧಿಕ ಮಂದಿ ಸ್ಥಳದಲ್ಲಿದ್ದರು ಎಂದು ತಿಳಿದುಬಂದಿದೆ. 5 ಜೆಸಿಬಿ ಸ್ಥಳದಲ್ಲಿ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು 20 ಆಂಬುಲೆನ್ಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾಧಿಕಾರಿ ದೀಪಾ ಚೋಳನ್ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದ್ದಾರೆ.
ಐದು ಅಂತಸ್ತಿನ ಕಟ್ಟಡ ಇದಾಗಿದ್ದು, ಆರನೇ ಅಂತಸ್ತಿನ ಕಾಮಗಾರಿಗಳು ನಡೆಯುತ್ತಿದ್ದವು. ಇಂದು ಸಂಜೆ ಏಕಾಏಕಿ ಕಟ್ಟಡ ಕುಸಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


