ರಾಜ್ಯ

ಧಾರವಾಡ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, 56 ಮಂದಿಯ ರಕ್ಷಣೆ

ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾಗಿದ್ದು, ಈವರೆಗೂ ಸುಮಾರು 52 ಮಂದಿಯನ್ನು ರಕ್ಷಣೆ ಮಾಡಲಾಗಿದೆ.

ಧಾರವಾಡ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, 56 ಮಂದಿಯ ರಕ್ಷಣೆ
ಧಾರವಾಡ ಕಟ್ಟಡ ಕುಸಿತ
Published On :
ಧಾರವಾಡ: ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದ್ದು, ಈವರೆಗೂ ಸುಮಾರು 52 ಮಂದಿಯನ್ನು ರಕ್ಷಣೆ ಮಾಡಲಾಗಿದೆ.
ಇಲ್ಲಿನ ಕುಮಾರೇಶ್ವರ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಐದು ಅಂತಸ್ತಿನ ಕಟ್ಟಡ ಸಂಪೂರ್ಣ ನೆಲಸಮವಾಗಿದ್ದು, ಕಟ್ಟಡದ ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈವರೆಗೂ 6 ಶವಗಳನ್ನು ಹೊರತೆಗೆಯಲಾಗಿದ್ದು, ಅಂತೆಯೇ ಸುಮಾರು 56 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಪೈಕಿ 43 ಮಂದಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 13 ಮಂದಿಯನ್ನು ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಧಾರವಾಡ ಜಿಲ್ಲಾಸ್ಪತ್ರೆ ವೈದ್ಯ ಗಿರಿಧರ್ ಕುಕನೂರ್ ಹೇಳಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಸ್ಥಳೀಯರು ಕೂಡ ರಕ್ಷಣಾ ಕಾರ್ಯಾಚರಣೆಗೆ ಕೈಜೋಡಿಸಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆಯೇ ರಾಷ್ಟ್ರೀಯ ವಿಪತ್ತ ನಿರ್ವಹಣಾ ದಳ ಕೂಡ ಕಾರ್ಯಾಚರಣೆ ಧುಮುಕಿದ್ದು, ಅತ್ಯಾಧುನಿಕ ಯಂತ್ರಗಳ ಮೂಲಕ ಕಾರ್ಯಾಚರಣೆ ನಡೆಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.