ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ, 8.41 ಲಕ್ಷ ವಿದ್ಯಾರ್ಥಿಗಳು ಹಾಜರು
ಇಂದಿನಿಂದ (ಗುರುವಾರ) ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ (ಎಸ್‌ಎಸ್‌ಎಲ್‌ಸಿ) ಪರೀಕ್ಷೆ ಪ್ರಾರಂಭವಾಗಿದೆ. ಪರೀಕ್ಷೆಗಳು ಸಾಂಗವಾಗಿ ನೆರವೇರಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ....

Published On :
ಬೆಂಗಳೂರು: ಇಂದಿನಿಂದ (ಗುರುವಾರ) ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ (ಎಸ್‌ಎಸ್‌ಎಲ್‌ಸಿ) ಪರೀಕ್ಷೆ ಪ್ರಾರಂಭವಾಗಿದೆ. ಪರೀಕ್ಷೆಗಳು ಸಾಂಗವಾಗಿ ನೆರವೇರಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಾಕಷ್ಟು ಸಿದ್ದತೆ ನಡೆಸಿದೆ. ಈ ವರ್ಷ 8,41,666 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ
ಮುಂಬರುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪರೀಕ್ಷೆಗೆ ಭಾರೀ ಭದ್ರತೆ ಒದಗಿಸಲಾಗಿದೆ. ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಪರೀಕ್ಷೆಗಳು ನಡೆಯಲಿದೆ.ರಾಜ್ಯದಾದ್ಯಂತ 2,847 ಕೇಂದ್ರಗಳಲ್ಲಿ ನಡೆಯಲಿದೆ. ಈ ವರ್ಷ ಕಳೆದ ವರ್ಷಕ್ಕೆ ಹೋಲಿಸಿದರೆ 3,578 ಹೆಚ್ಚುವರಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಂಗಳೂರಿನ ದಕ್ಷಿಣದಿಂದ 65,451 ವಿದ್ಯಾರ್ಥಿಗಳಿದ್ದರೆ ಬೆಂಗಳೂರು ಉತ್ತರದಲ್ಲಿ 49,336 ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ.
ಕೊಡಗಿನಲ್ಲಿ 7,240 ವಿದ್ಯಾರ್ಥಿಗಳು, ಶಿರಸಿ, ಉತ್ತರ ಕನ್ನಡದಲ್ಲಿ 9,766 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇನ್ನು ಒಟ್ಟಾರೆ 4,651 ಮಕ್ಕಳು ವಿಶೇಷ ಚೇತನರಾಗಿದ್ದು ಲಾಖೆಯು ಈ ಅಭ್ಯರ್ಥಿಗಳಿಗೆ ವಿಷಯವನ್ನು ಆಯ್ಕೆ ಮಾಡುವಲ್ಲಿ ಬಹುಆಯ್ಕೆಯ ಅನುಕೂಲತೆ ಒದಗಿಸಿದೆ. ಗಣಿತ ಮತ್ತು ವಿಜ್ಞಾನದ ಬದಲಿ ಬೇರೆ ವಿಷಯಗಳ ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ವಿದ್ಯಾರ್ಥಿಗಳುStudentsಎಸ್‌ಎಸ್‌ಎಲ್‌ಸಿ ಪರೀಕ್ಷೆಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿkarnataka SSLC examsKarnataka Education Examination Board
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


