ಬೆಂಗಳೂರು: ಮಲಗಿರುವಾಗಲೇ ತಲೆ ಮೇಲೆ ಕಲ್ಲು ಎತ್ತಿಹಾಕಿ ಸೆಕ್ಯೂರಿಟಿ ಗಾರ್ಡ್ ಹತ್ಯೆ!
ಮಲಗಿರುವಾಗಲೇ ತಲೆ ಮೇಲೆ ಕಲ್ಲು ಎತ್ತಿಹಾಲಿ ಎಟಿಎಂ ಸೆಕ್ಯೂರಿಟಿ ಗಾರ್ಡ್ ಒಬ್ಬನನ್ನು ಬರ್ಬರವಾಗಿ ಕೊಂದಿರುವ ಘಟನೆ ಬೆಂಗಳುರಿನ ಪದ್ಮನಾಭನಗರದಲ್ಲಿ ನಡೆದಿದೆ.

Published On :
ಬೆಂಗಳೂರು: ಮಲಗಿರುವಾಗಲೇ ತಲೆ ಮೇಲೆ ಕಲ್ಲು ಎತ್ತಿಹಾಲಿ ಎಟಿಎಂ ಸೆಕ್ಯೂರಿಟಿ ಗಾರ್ಡ್ ಒಬ್ಬನನ್ನು ಬರ್ಬರವಾಗಿ ಕೊಂದಿರುವ ಘಟನೆ ಬೆಂಗಳುರಿನ ಪದ್ಮನಾಭನಗರದಲ್ಲಿ ನಡೆದಿದೆ.
ಗೌಡಯ್ಯನಪಾಳ್ಯದ ನಿವಾಸಿ ಲಿಂಗಪ್ಪ (62) ಹತ್ಯೆಯಾದ ಸೆಕ್ಯೂರಿಟಿ ಗಾರ್ಡ್ ಆಗಿದ್ದು ಈತ ಮೂಲತಃ ಬಾಗಲಕೋಟೆಯವರಾಗಿದ್ದರು.ಉತ್ತರಹಳ್ಳಿ ಮುಖ್ಯರಸ್ತೆಯ ಕದಿರೇನಹಳ್ಳಿ ಪೆಟ್ರೋಲ್‍ಬಂಕ್ ಸಮೀಪದ ಕರ್ನಾಟಕ ಬ್ಯಾಂಕ್ ಎಟಿಎಂ ಕೇಂದ್ರದ ಸೆಕ್ಯೂರಿಟಿ ಗಾರ್ಡ್ ಆಗಿದ್ದ ಲಿಂಗಪ್ಪ ಎಟಿಎಂ ಕೇಂದ್ರದ ಫಸ್ಟ್ ಫ್ಲೋರ್ ನಲ್ಲಿ ನಿದ್ರಿಸುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದಿದ್ದಾರೆ. ಬಳಿಕ ಅವರ ಜೇಬಿನಲ್ಲಿದ್ದ ಹಣ ತೆಗೆದುಕೊಂಡು ಪರಾರಿಯಾಗಿದ್ದಾರೆ.
ಭಾನುವಾರ ಮುಂಜಾನೆ ಕಟ್ಟಡದ ಮೊದಲ ಮಹಡಿಯಲ್ಲಿದ್ದ ಬ್ಯೂಟಿ ಪಾರ್ಲರ್ ಮಾಲೀಕರು ಅಂಗಡಿ ತೆರೆಯುವುದಕ್ಕೆ ಆಗಮಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಅಂಗಡಿ ಮಾಲೀಕರು ತಕ್ಷಣ ಪೋಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಆಗಮಿಸಿದ ಕುಮಾರಸ್ವಾಮಿ ಲೇಔಟ್ ಪೊಲೀಸರು ಶವವನ್ನು ಕೆಂಪೇಗೌಡ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.
ಲಿಂಗಪ್ಪ ಕಳೆದ ನಾಲ್ಕು ವರ್ಷಗಳಿಂದ ಬ್ಯಾಂಕಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು ಘಟನೆಗೆ ಕಾರಣಗಳು ತಿಳಿದು ಬಂದಿಲ್ಲ. ಘಟನೆ ಕುಮಾರಸ್ವಾಮಿ ಲೇಔಟ್ ಪೊಲೀಸ್‍ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


