ಮಳೆ ನೀರು ಕೊಯ್ಲು ಅಳವಡಿಸಿಲ್ಲವೇ, ನಿಮ್ಮ ಮನೆಗೆ ನೀರಿನ ಸರಬರಾಜು ಕಡಿಮೆ- ಜಲಮಂಡಳಿ ಎಚ್ಚರಿಕೆ
ನಗರದಲ್ಲಿ ಮಳೆ ನೀರು ಕೊಯ್ಲು ಅವಶ್ಯವಾಗಿದ್ದರೂ, ಇಲ್ಲಿಯವರೆಗೆ ಅದನ್ನು ಅಳವಡಿಸದ ಮನೆಗಳಿಗೆ ಕಾವೇರಿ ನೀರಿನ ಸರಬರಾಜಿಗೆ ಮಿತಿ ಹೇರಲಾಗುವುದು ಎಂದು ಜಲಮಂಡಳಿ ಎಚ್ಚರಿಕೆ ನೀಡಿದೆ.

ಬೆಂಗಳೂರು: ನಗರದಲ್ಲಿ ಮಳೆ ನೀರು ಕೊಯ್ಲು ಅವಶ್ಯವಾಗಿದ್ದರೂ, ಇಲ್ಲಿಯವರೆಗೆ ಅದನ್ನು ಅಳವಡಿಸದ ಮನೆಗಳಿಗೆ ಕಾವೇರಿ ನೀರಿನ ಸರಬರಾಜಿಗೆ ಮಿತಿ ಹೇರಲಾಗುವುದು ಎಂದು ಜಲಮಂಡಳಿ ಎಚ್ಚರಿಕೆ ನೀಡಿದೆ.
ವಿಶ್ವ ಜಲದಿನದ ಅಂಗವಾಗಿ ಹೊಸ ನಿಯಮಗಳ ಅಧಿಸೂಚನೆ ಹೊರಡಿಸಿರುವ ಜಲಮಂಡಳಿ, ನಗರದಲ್ಲಿ ಮಳೆನೀರು ಕೊಯ್ಲು ಯೋಜನೆಯ ಯಶಸ್ವಿ ಜಾರಿಗೆ ಮುಂದಾಗಿದೆ. ಮಳೆನೀರು ಕೊಯ್ಲು ಅಳವಡಿಸಿಕೊಂಡಿರುವ ಕಟ್ಟಡಗಳ ಸ್ಥಿತಿಗತಿಯ ಬಗ್ಗೆ ಆಯಾ ಪ್ರದೇಶದ ನಿವಾಸಿಗಳ ಕಲ್ಯಾಣ ಸಂಘಗಳಿಂದ ಮಾಹಿತಿ ಪಡೆಯಲಾಗುವುದು. ಅದನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಅಧಿಸೂಚನೆ ತಿಳಿಸಿದೆ.
ನಿವಾಸಿಗಳ ಕಲ್ಯಾಣ ಸಂಘ ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ನಗರದಲ್ಲಿರುವ ಎಲ್ಲ ತ್ಯಾಜ್ಯ ನೀರು ಶುದ್ಧೀಕರಣ ಘಟಕಗಳನ್ನು ತಪಾಸಣೆ ನಡೆಸಿ, ಅಪಾರ್ಟ್ ಮೆಂಟ್‍ಗಳಲ್ಲಿ ನಿಯಮಾನುಸಾರ ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲದಿರುವುದು ಕಂಡುಬಂದಲ್ಲಿ, ವಿದ್ಯುತ್ ಸರಬರಾಜು ಇಲಾಖೆಗೆ ದೂರು ನೀಡಲಾಗುವುದು ಹಾಗೂ ನೀರಿನ ಸರಬರಾಜು ಕಡಿಮೆ ಮಾಡಲಾಗುವುದು ಎಂದು ಅಧಿಸೂಚನೆ ಎಚ್ಚರಿಕೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


