ಉಡುಪಿ: ಶಿಷ್ಯ ಸ್ವೀಕಾರಕ್ಕೆ ಸಿದ್ದವಾದ ಪಲಿಮಾರು ಶ್ರೀ, ಶೈಲೇಶ್ ಉಪಾಧ್ಯಾಯಗೆ ದೀಕ್ಷೆ
ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು (63) ಶಿಷ್ಯ ಸ್ವೀಕಾರ ಮಾಡಲು ನಿರ್ಧರಿಸಿದ್ದಾರೆ. ತಮ್ಮ ಉತ್ತರಾಧಿಕಾರಿಯನ್ನಾಗಿ ಪಲಿಮಾರು ಮೂಲಮಠದ ಯೋಗ ದೀಪಿಕಾ ಗುರುಕುಲದಲ್ಲಿ ....

Published On :
ಉಡುಪಿ: ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು (63) ಶಿಷ್ಯ ಸ್ವೀಕಾರ ಮಾಡಲು ನಿರ್ಧರಿಸಿದ್ದಾರೆ. ತಮ್ಮ ಉತ್ತರಾಧಿಕಾರಿಯನ್ನಾಗಿ ಪಲಿಮಾರು ಮೂಲಮಠದ ಯೋಗ ದೀಪಿಕಾ ಗುರುಕುಲದಲ್ಲಿ ವೇದ ವಿದ್ಯಾರ್ಥಿ ಶೈಲೇಶ್ ಉಪಾಧ್ಯಾಯ ಅವರನ್ನು ಆಯ್ಕೆ ಮಾಡಿದ್ದಾರೆ.
ಕೊಡವೂರು ಕಂಬಳಕಟ್ಟದವರಾದ ಶೈಲೇಶ್ ಸುರೇಂದ್ರ ಉಪಾಧ್ಯಾಯ, ಲಕ್ಷ್ಮಿ ಉಪಾಧ್ಯಾಯ ಅವರ ಪುತ್ರ. ಇವರು ನಾಲ್ಕನೇ ವರ್ಷದ ವೇದಾದ್ಯಯನದಲ್ಲಿ ತೊಡಗಿಕೊಂಡಿದ್ದು ಇವರ ಸೋದರ ವಿಶ್ವೇಶ ಉಪಾಧ್ಯಾಯ ಮುನಿಯಾಲು ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ಅಧ್ಯಯನ ಮಾಡುತ್ತಿದ್ದಾರೆ.ಸನ್ಯಾಸ ದೀಕ್ಷೆ ಪಡೆದ ನಂತರ ಪಲಿಮಾರು ಶ್ರೀಗಳ ಬಳಿ ವಿದ್ಯಾಭ್ಯಾಸ ಮುಂದುವರಿಸುವ ತೀರ್ಮಾನಕ್ಕೆ ಶೈಲೇಶ್ ಬಂದಿದ್ದಾರೆ ಎನ್ನಲಾಗಿದೆ.
ದಕ್ಷಿಣ ಕನ್ನಡ ಕಟೀಲು ಶಿಬರೂರು ಮೂಲದವರಾದ ಪಲಿಮಾರು ಶ್ರೀಗಳು 1974ರಲ್ಲಿ ಶ್ರೀವಿದ್ಯಾಮಾನ್ಯತೀರ್ಥ ಅವರಿಂದ ಸನ್ಯಾಸ ದೀಕ್ಷೆ ಪಡೆಇದ್ದರು.ಧಾರ್ಮಿಕ ಚಟುವಟಿಕೆಗಳ ಮೂಲಕವೇ ಹೆಸರಾಗಿರುವ ವಿದ್ಯಾಧೀಶ ತೀರ್ಥ ಶ್ರೀಪಾದರು ತಮ್ಮ ಎರಡನೇ ಪರ್ಯಾಯ ಅವಧಿಯಲ್ಲಿ ಶ್ರೀಕೃಷ್ಣನ ಪೂಜಾ ಕೈಂಕರ್ಯದಲ್ಲಿ ತೊಡಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


