ರಾಜ್ಯ

ಹಾಸನದಲ್ಲಿ ಸಚಿವ ರೇವಣ್ಣ ಆಪ್ತರ ಮನೆಗಳ ಮೇಲೂ ಐಟಿ ದಾಳಿ!

ಸಿಎಂ ಆಪ್ತ ಸಿಎಸ್ ಪುಟ್ಟರಾಜು ಅವರ ಆಪ್ತರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ವಿಚಾರ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವಂತೆಯೇ ಅತ್ತ ಸಚಿವ ಎಚ್ ಡಿ ರೇವಣ್ಣ ಆಪ್ತರಿಗೂ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಹಾಸನದಲ್ಲಿ ಸಚಿವ ರೇವಣ್ಣ ಆಪ್ತರ ಮನೆಗಳ ಮೇಲೂ ಐಟಿ ದಾಳಿ!
ಸಂಗ್ರಹ ಚಿತ್ರ
Published On :
ಹಾಸನ: ಸಿಎಂ ಆಪ್ತ ಸಿಎಸ್ ಪುಟ್ಟರಾಜು ಅವರ ಆಪ್ತರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ವಿಚಾರ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವಂತೆಯೇ ಅತ್ತ ಸಚಿವ ಎಚ್ ಡಿ ರೇವಣ್ಣ ಆಪ್ತರಿಗೂ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಎಚ್ ಡಿ ರೇವಣ್ಣ ಅವರ ಮೂವರು ಆಪ್ತರಿಗೆ ಸೇರಿದೆ ಎನ್ನಲಾದ 10ಕ್ಕೂ ಹೆಚ್ಚು ಮನೆ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ರೇವಣ್ಣ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಗುತ್ತಿಗೆದಾರರಾದ ನಾರಾಯಣ ರೆಡ್ಡಿ, ಅಶ್ವತ್, ರಾಯಗೌಡ ಅವರ ಹಾಸನದ ಮನೆಗಳ ಮೇಲೆ ದಾಳಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅವರ ಮನೆಗಳು ಮಾತ್ರವಲ್ಲದೇ ಅವರ ಬೆಂಬಲಿಗರ ಮನೆಗಳ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಾಯಗೌಡ ಅವರ ಚೆನ್ನರಾಯಪಟ್ಟಣದ ನಿವಾಸವೂ ಸೇರಿದಂತೆ ಒಟ್ಟು 10 ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪತ್ರಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಂಡ್ಯದಲ್ಲಿ ದಾಳಿ ಮಾಡಿದ ಐಟಿ ಅಧಿಕಾರಿಗಳ ಮತ್ತೊಂದು ತಂಡವೇ ಈ ದಾಳಿ ಮಾಡಿದ್ದು, ಸುಮಾರು 10 ಕಡೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.